ಸಾಹಿತಿ, ನಾಡೋಜ ಕಯ್ಯಾರ ಕಿಞ್ಞಣ್ಣ ರೈ ವಿಧಿವಶ

ನಾಡೋಜ ಪ್ರಶಸ್ತಿ ಪುರಸ್ಕೃತ ಸಾಹಿತಿ ಕಾಸರಗೋಡಿನ ಕಯ್ಯಾರ ಕಿಞ್ಞಣ್ಣ ರೈ ವಿಧಿವಶರಾಗಿದ್ದಾರೆ...
ಕಯ್ಯಾರ ಕಿಞ್ಞಣ್ಣ ರೈ(ಸಂಗ್ರಹ ಚಿತ್ರ)
ಕಯ್ಯಾರ ಕಿಞ್ಞಣ್ಣ ರೈ(ಸಂಗ್ರಹ ಚಿತ್ರ)

ಬೆಂಗಳೂರು: ನಾಡೋಜ ಪ್ರಶಸ್ತಿ ಪುರಸ್ಕೃತ ಸಾಹಿತಿ ಕಾಸರಗೋಡಿನ ಕಯ್ಯಾರ ಕಿಞ್ಞಣ್ಣ ರೈ ವಿಧಿವಶರಾಗಿದ್ದಾರೆ.

ಶತಾಯುಷಿ ಕಯ್ಯಾರ ಕಿಞ್ಞಣ್ಣ ರೈ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಕಾಸರಗೋಡಿನ ಬದಿಯಡ್ಕ ಗ್ರಾಮದ ಮನೆಯಲ್ಲಿ ನಿಧನರಾಗಿದ್ದಾರೆ.

1915ರ ಜೂನ್ 8 ರಂದು ಕಾಸರಗೋಡಿನ ಪೆರಡಾಲ ಗ್ರಾಮದಲ್ಲಿ ಜನಿಸಿದ್ದರು. ರೈರ ತಂದೆ ದುರ್ಗಪ್ಪ ರೈ ತಾಯಿ ದೇಯಕ್ಕ.

ಕಯ್ಯಾರ ಕಿಞ್ಞಣ್ಣ ರೈ ಅವರು ಹಲವು ತುಳು ಕವನ ಲೇಖನಗಳನ್ನು ಬರೆದಿದ್ದಾರೆ. ಶ್ರೀಮುಖ, ಐಕ್ಯಗಾನ, ಕೊರಗ, ಚೇತನ, ಶತಮಾನದ ಗಾನ, ಗಂಧವತಿ, ಪ್ರತಿಭಾ ಪಯಸ್ವಿನಿ ಕವನ ಸಂಕಲನಗಳು.

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ್ದ ಕಯ್ಯಾರ ಕಿಞ್ಞಣ್ಣ ರೈ ಅವರು ಪತ್ರಕರ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪ್ರಭಾತ, ರಾಷ್ಟ್ರಬಂಧು ಪತ್ರಿಕೆಗಳಲ್ಲಿ ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com