ಪ್ರಧಾನ ಸುದ್ದಿ

ರಿಯಾಜ್‍ಗೆ ಜಾಮೀನು ನಿರಾಕರಣೆ

ರಿಯಾಜ್‍ಗೆ ಜಾಮೀನು ನಿರಾಕರಣೆ
ಪಿಆರ್‍ಒ ಸೈಯ್ಯದ್ ರಿಯಾಜ್‍
Published On :

ಬೆಂಗಳೂರು: ಲೋಕಾಯುಕ್ತ ಕಚೇರಿಯಲ್ಲಿ ನಡೆದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಪಿಆರ್‍ಒ ಸೈಯ್ಯದ್ ರಿಯಾಜ್‍ಗೆ ಮಂಗಳವಾರ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ರಿಯಾಜ್ ಅವರ ಜಾಮೀನು ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ರಿಯಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದರ ವಿಚಾರಣೆ ನಡೆಸಿದ ನ್ಯಾ.ಎಲ್.ನಾರಾಯಣ ಸ್ವಾಮಿ ಅವರಿದ್ದ ಏಕಸದಸ್ಯ ಪೀಠ, ವಿಶೇಷ ತನಿಖಾ ತಂಡ (ಎಸ್‍ಐಟಿ)ಗೆ ನೋಟಿಸ್ ಜಾರಿ ಮಾಡಿ ಒಂದು ವಾರದ ಒಳಗಾಗಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ಈಗಾಗಲೇ ಪ್ರಕರಣದ ತನಿಖೆ ಪೂರ್ಣಗೊಳಿಸಿದೆ. ಅಲ್ಲದೇ ಗುರುತರ ಅಥವಾ ಗಂಬಿsೀರ ಆರೋಪ ನಮ್ಮ ಕಕ್ಷಿದಾರರ ಮೇಲಿಲ್ಲ. ಆದ್ದರಿಂದ ಜಾಮೀನು ನೀಡಲು ಯೋಗ್ಯವಾದ ಪ್ರಕರಣ ಇದಾಗಿದೆ ಎಂದು ಅರ್ಜಿಯಲ್ಲಿ ಕೋರಲಾಗಿತ್ತು. ಅರ್ಜಿದಾರರ ಪರ ಹಸ್ಮತ್ ಪಾಷಾ ವಾದ ಮಂಡಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಯ್ಯದ್ ರಿಯಾಜ್, ಪತ್ರಕರ್ತನಾಗಿದ್ದ ಶ್ರೀನಿವಾಸಗೌಡ, ರಿಯಲ್ ಎಸ್ಟೇಟ್‍ನ ಶಂಕರೇಗೌಡ ಹಾಗೂ ಅಶೋಕ್ ಕುಮಾರ್ ಅವರ ಜಾಮೀನು ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ಆ.14ರಂದು ವಜಾಗೊಳಿಸಿ, ಆರೋಪಿಗಳನ್ನು ಆ.27ರವರೆಗೆ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.