
ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ(ಎಸ್ ಐಟಿ) ಮತ್ತೊಬ್ಬ ಆರೋಪಿಯನ್ನು ಬುಧವಾರ ಬಂಧಿಸಿದೆ.
ಪೊಲೀಸ್ ಪ್ರಧಾನ ಕಚೇರಿಯ ಗುಮಾಸ್ತ ನರಸಿಂಹಮೂರ್ತಿ ಬಂಧಿತ ಆರೋಪಿ. ಇತ್ತೀಚೆಗಷ್ಟೇ ಲೋಕಾಯುಕ್ತ ಮಾಜಿ ಜಂಟಿ ಆಯುಕ್ತ ಸಯ್ಯದ್ ರಿಯಾಜ್ ಆಪ್ತ ಆರ್ ಟಿಐ ಕಾರ್ಯಕರ್ತ ರಾಜಶೇಖರ್ ನನ್ನಾ ಬಂಧಿಸಲಾಗಿತ್ತು. ಇಂದು ನರಸಿಂಹಮೂರ್ತಿಯನ್ನು ಬಂಧಿಸಲಾಗಿದ್ದು, ಈ ಮೂಲಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತ ಆರೋಪಿಗಳ ಸಂಖ್ಯೆ 9ಕ್ಕೇರಿದೆ.
ಅಶ್ವಿನ್ ರಾವ್ ಮೊದಲನೇ ಆರೋಪಿಯಾಗಿದ್ದು ಭಾಸ್ಕರ್ ಮತ್ತು ಸಾದಿಕ್ ಕ್ರಮವಾಗಿ ಎರಡು ಮತ್ತು ಮೂರನೇ ಆರೋಪಿಯಾಗಿದ್ದಾರೆ. ಲೋಕಾಯುಕ್ತ ಮಾಜಿ ಜಂಟಿ ಆಯುಕ್ತ ಸಯ್ಯದ್ ರಿಯಾಜ್, ಅಶೋಕ್ ಕುಮಾರ್, ಶ್ರೀನಿವಾಸ್ ಗೌಡ, ಶಂಕರೇಗೌಡ, ರಾಜಶೇಖರ್ ಮತ್ತು ನರಸಿಂಹಮೂರ್ತಿ ಬಂಧಿತ ಆರೋಪಿಗಳಾಗಿದ್ದಾರೆ.
Advertisement