ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ: ಬಾಲಕ ದುರ್ಮರಣ

ಪೀಣ್ಯದ ಎಸ್ಆರ್ಎಸ್ ಕ್ರಾಸ್ ಬಳಿ ಖಾಸಗಿ ಬಸ್ ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 7 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆಯೊಂದು ಭಾನುವಾರ ನಡೆದಿದೆ...
ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ: ಬಾಲಕ ದುರ್ಮರಣ (ಸಾಂದರ್ಭಿಕ ಚಿತ್ರ)
ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ: ಬಾಲಕ ದುರ್ಮರಣ (ಸಾಂದರ್ಭಿಕ ಚಿತ್ರ)
Updated on: 

ಬೆಂಗಳೂರು: ಪೀಣ್ಯದ ಎಸ್ಆರ್ಎಸ್ ಕ್ರಾಸ್ ಬಳಿ ಖಾಸಗಿ ಬಸ್ ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 7 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆಯೊಂದು ಭಾನುವಾರ ನಡೆದಿದೆ.

ಸಾವನ್ನಪ್ಪಿದ ಬಾಲಕನನ್ನು ಲಿಖಿತ್ ಗೌಡ (7) ಎಂದು ಹೇಳಲಾಗುತ್ತಿದ್ದು, ಬಾಲಕ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಬಾಲಕ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಬಾಲಕನ ತಾಯಿಗೂ ಗಾಯಗಳಾಗಿರುವ ಹಿನ್ನೆಲೆಯಲ್ಲಿ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಲನ ಈ ವರ್ತನೆ ಕಂಡ ಸ್ಥಳೀಯರು ರೊಚ್ಚಿಗೆದ್ದು ಖಾಸಗಿ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಸುದ್ದಿ ತಿಳಿಯುತ್ತಿದ್ದ ಸ್ಥಳಕ್ಕಾಗಮಿಸಿದ ಯಶವಂತಪುರ ಸಂಚಾರಿ ಪೊಲೀಸರು ಮಧ್ಯಪ್ರವೇಶಿಸಿ ವಾತಾವರಣವನ್ನು ತಿಳಿಗೊಳಿಸಿದ್ದಾರೆ. ಪ್ರಸ್ತುತ ವಾಹನ ಚಾಲಕನನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com