ಅಕ್ರಮ ಆಸ್ತಿ ಗಳಿಕೆ ಪ್ರಕರಣ: ರಾಜ್ಯ ಸರ್ಕಾರದ ಮೇಲ್ಮನವಿ ವಜಾ ಕೋರಿ ಜಯಾ ಅಫಿಡವಿಟ್

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸುವಂತೆ ಕೋರಿ ತಮಿಳುನಾಡು...
ಜಯಲಲಿತಾ
ಜಯಲಲಿತಾ
Updated on: 

ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸುವಂತೆ ಕೋರಿ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಸೋಮವಾರ ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದಾರೆ.

ಮೇ 13ರಂದು ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ.

ಜಯಾ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿಗೆ ತಡೆ ನೀಡಬೇಕೆಂದು ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿರುವುದಾಗಿ ರಾಜ್ಯ ಸರ್ಕಾರದ ಪರ ವಕೀಲ ಜೋಸೆಫ್ ಅರಿಸ್ಟಾಟಲ್ ತಿಳಿಸಿದ್ದಾರೆ. ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ, ಅವರ ಆಪ್ತ ಗೆಳತಿ ಶಶಿಕಲಾ, ಇಳವರಸಿ ಹಾಗೂ ವಿಎನ್ ಸುಧಾಕರನ್ ಅವರಿಗೆ ಕ್ಲೀನ್ ಚಿಟ್ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com