ನವದೆಹಲಿ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಗದ್ದುಗೆ ಹೇರಲು ಜೆಡಿಎಸ್ ನೊಂದಿಗೆ ಮೈತ್ರಿಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನನ್ ನೀಡಿದೆ ಎನ್ನಲಾಗಿದೆ.
ಬಿಬಿಎಂಪಿ ಅಧಿಕಾರ ಪಡೆಯುವ ಸಲುವಾಗಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷ ಡಾ. ಪರಮೇಶ್ವರ್ ಅವರಿಗೆ ಕರ್ನಾಟಕ ರಾಜ್ಯ ಉಸ್ತುವಾರಿ, ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಸೂಚನೆ ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಅಧಿಕಾರದಿಂದ ಕೋಮುವಾದಿ ಬಿಜೆಪಿಯನ್ನು ದೂರವಿಡಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿರಬಾರದು. ಬಿಜೆಪಿ ಅಧಿಕಾರದಲ್ಲಿದ್ದರೆ ಅದು ಪಕ್ಷಕ್ಕೆ ಹಾಗೂ ರಾಜ್ಯಕ್ಕೆ ಒಳ್ಳೆಯದಲ್ಲ ಎಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ದಿಗ್ವಿಜಯ್ ಸಿಂಗ್ ಸೂಚಿಸಿದ್ದಾರೆ ಎನ್ನಲಾಗಿದೆ.