ಕಲಬುರ್ಗಿ ಹತ್ಯೆ: ಪ್ರಗತಿಪರ ಸಾಹಿತಿಗಳಿಗೆ ಭದ್ರತೆ

ಖ್ಯಾತ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಅವರ ಹತ್ಯೆಯ ಹಿನ್ನೆಲೆಯಲ್ಲಿ ಬೆದರಿಕೆಗೊಳಗಾಗಿರವ ಕೆಲವು ಪ್ರಗತಿಪರ ಸಾಹಿತಿಗಳಿಗೆ ಭದ್ರತೆ ಒದಗಿಸಲಾಗಿದೆ ಎಂದು...
ಗಿರೀಶ್ ಕಾರ್ನಾಡ್ - ಚಂದ್ರಶೇಖರ್ ಪಾಟೀಲ್
ಗಿರೀಶ್ ಕಾರ್ನಾಡ್ - ಚಂದ್ರಶೇಖರ್ ಪಾಟೀಲ್
Updated on

ಬೆಂಗಳೂರು: ಖ್ಯಾತ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಅವರ ಹತ್ಯೆಯ ಹಿನ್ನೆಲೆಯಲ್ಲಿ ಬೆದರಿಕೆಗೊಳಗಾಗಿರವ ಕೆಲವು ಪ್ರಗತಿಪರ ಸಾಹಿತಿಗಳಿಗೆ ಭದ್ರತೆ ಒದಗಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಮೇಘರಿಕ ಅವರು ಹೇಳಿದ್ದಾರೆ.

ಜ್ಞಾನಪೀಠ ಪ್ರಶಸ್ತಿ ವಿಜೇತ ಗಿರೀಶ್ ಕಾರ್ನಾಡ್, ಎಸ್.ಎಲ್ ಭೈರಪ್ಪ, ಚಂದ್ರಶೇಖರ್ ಪಾಟೀಲ್, ಪ್ರೊ.ಕೆ.ಎಸ್.ಭಗವಾನ್ ಅವರಿಗೆ ಪೊಲೀಸ್ ಭದ್ರತೆಯ ವ್ಯವಸ್ಥೆ ಮಾಡಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ನಗರದಲ್ಲಿ ವಾಸಿಸುವ ಸಾಹಿತಿಗಳಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಲಾಗಿದೆ. ತಮ್ಮ ಠಾಣೆ ವ್ಯಾಪ್ತಿಯಲ್ಲಿರುವ ಸಾಹಿತಿಗಳ ನಿವಾಸಗಳ ಬಳಿ ಸಿಬ್ಬಂದಿಯನ್ನು ನಿಯೋಜಿಸುವಂತೆ ನಿಯಂತ್ರಣ ಕೊಠಡಿ ಮೂಲಕ ಇನ್‌ಸ್ಪೆಕ್ಟರ್‌ಗಳಿಗೆ ಮಾಹಿತಿ ರವಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com