
ಬೆಂಗಳೂರು: ಹಿರಿಯ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಅವರ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆ ವಹಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಲಬುರ್ಗಿ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುತ್ತೇವೆ. ಆರೋಪಿಗಳು ಯಾರೇ ಆಗಿದ್ದರೂ ಬಂಧಿಸುತ್ತೇವೆ ಎಂದು ತಿಳಿಸಿದರು.
ನಿನ್ನೆ ಧಾರವಾಡದಲ್ಲಿ ನಡೆದ ಕಲಬುರ್ಗಿ ಹತ್ಯೆ ಪ್ರಕರಣವನ್ನು ಸಿಬಿಐ ಅಥವಾ ಸಿಐಡಿಗೆ ಕೊಡಿ ಎಂದು ಮಠಾಧೀಶರು ಒತ್ತಾಯಿಸುತ್ತಿದ್ದರು. ಈ ಬಗ್ಗೆ ಪ್ರತಿಕ್ರಿಸಿದ್ದ ಸಿದ್ದರಾಮಯ್ಯ, ಕಲಬುರ್ಗಿ ಅವರ ಹತ್ಯೆ ಕುರಿತು ಸದ್ಯ ವಿಶೇಷ ಪೊಲೀಸ್ ತಂಡವನ್ನು ರಚಿಸಿ ತನಿಖೆ ನಡೆಸಲಾಗುತ್ತಿದೆ. ಅಗತ್ಯ ಬಿದ್ದರೆ ಉನ್ನತ ಮಟ್ಟದ ತನಿ ಸಂಸ್ಥೆಗೆ ನೀಡಲಾಗುವುದು ಎಂದು ತಿಳಿಸಿದ್ದರು.
Advertisement