
- ಮಲ್ಲೇಶಪ್ಪ ಮಡಿವಾಳಪ್ಪ ಕಲಬುರ್ಗಿ 28.11.1938ರಂದು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗುಬ್ಬೆವಾಡ ಗ್ರಾಮದಲ್ಲಿ ಜನಿಸಿದರು. ತಾಯಿ ಗುರಮ್ಮ ತಂದೆ ಮಡಿವಾಳಪ್ಪ.
- ಕರ್ನಾಟಕದ ಪ್ರಸಿದ್ಧ ವಿದ್ವಾಂಸರಲ್ಲಿ ಒಬ್ಬರಾದ ಇವರು ಅಧ್ಯಯನ ಮತ್ತು ಕೊಡುಗೆಗಳು, ಶಾಸನಶಾಸ್ತ್ರ, ಸಾಹಿತ್ಯ ಚರಿತ್ರೆ, ಛಂದಸ್ಸು, ಇತಿಹಾಸ, ವಾಸ್ತುಶಿಲ್ಪ, ಗ್ರಂಥಸಂಪಾದನೆ, ಹಸ್ತಪ್ರತಿಶಾಸ್ತ್ರ, ಜಾನಪದ, ಸ್ಥಳನಾಮಗಳ ಅಧ್ಯಯನ, ಸಾಹಿತ್ಯ ವಿಮರ್ಶೆ ಮುಂತಾದ ಹತ್ತು ಹಲವು ಕ್ಷೇತ್ರಗಳಲ್ಲಿ ಹರಡಿಕೊಂಡಿವೆ.
- ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿ.ಎ.ಎಂ..ಎ.ಪದವಿ. 1968ರಲ್ಲಿ ಅವರು ಸಲ್ಲಿಸಿದ, `ಕವಿರಾಜಮಾರ್ಗ ಪರಿಸರದ ಕನ್ನಡ ಸಾಹಿತ್ಯ' ಎಂಬ ಮಹಾಪ್ರಬಂಧಕ್ಕೆ ಪಿ.ಎಚ್‍ಡಿ. ಪದವಿ ಬಂತು. 1962ರಲ್ಲಿ ಕರ್ನಾಟಕ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ವೃತ್ತಿಜೀವನ ಆರಂಭ. 1966 ರಲ್ಲಿ ಕರ್ನಾಟಕ ವಿವಿಯ ಕನ್ನಡ ಅಧ್ಯಯನ ಪೀಠ'ದಲ್ಲಿ ಅಧ್ಯಾಪಕರಾಗಿ ನೇಮಕ. 1998-2001 ರ ಕಾಲಾವಧಿಯಲ್ಲಿ ಕಲಬುರ್ಗಿಯವರು ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಉಪ ಕುಲಪತಿಗಳಾಗಿದ್ದರು. ಕರ್ನಾಟಕ ಸರ್ಕಾರ ಪ್ರಕಟಿಸಿದ ಹದಿನೈದು ಸಂಪುಟಗಳ `ವಚನಸಾಹಿತ್ಯ ಸಂಪುಟ'ಮಾಲೆಗೆ ಪ್ರಧಾನ ಸಂಪಾದಕರಾಗಿದ್ದರು.
ಕವನ ಸಂಕಲನ
- ನೀರು ನೀರಡಿಸಿತ್ತು, ನಾಟಕ, ಕೆಟ್ಟಿತ್ತು ಕಲ್ಯಾಣ ಕವಿರಾಜಮಾರ್ಗ ಪರಿಸರದ ಕನ್ನಡಸಾಹಿತ್ಯ
- ಮಾರ್ಗ - ನಾಲ್ಕು ಸಂಪುಟಗಳು
- ಐತಿಹಾಸಿಕ
- ಕನ್ನಡ ಹಸ್ತಪ್ರತಿ ಶಾಸ್ತ್ರ
- ಕನ್ನಡ ಗ್ರಂಥ ಸಂಪಾದನ ಶಾಸ್ತ್ರ
- ಕನ್ನಡ ಸಂಶೋಧನ ಶಾಸ್ತ್ರ
- ಕನ್ನಡ ನಾಮವಿಜ್ಞಾನ
- ಧಾರವಾಡ ಜಿಲ್ಲೆಯ ಶಾಸನಸೂಚಿ
- ಮಹಾರಾಷ್ಟ್ರದ ಕನ್ನಡ ಶಾಸನಗಳು
- ಶಾಸನಗಳಲ್ಲಿ ಶಿವಶರಣರು ಶಾಸನಶಾಸ್ತ್ರ
- ಶಾಸನ ವ್ಯಾಸಂಗ, ಭಾಗ 1 ಮತ್ತು ಭಾಗ 2
- ಶಾಸನ ವ್ಯಾಸಂಗ: ಸಮಾಧಿ, ಬಲಿದಾನ, ವೀರಮರಣ ಸ್ಮಾರಕಗಳು
- ಶಾಸನ ಸಂಪದ
- ಧಾರವಾಡ ಜಿಲ್ಲೆಯ ಶಾಸನಸೂಚಿ ಶೈಕ್ಷಣಿಕ ಶಿಸ್ತುಗಳ ಕುರಿತ ಕೃತಿಗಳು
- ಕನ್ನಡ ಗ್ರಂಥಸಂಪಾದನ ಶಾಸ್ತ್ರ
- ಕನ್ನಡ ಹಸ್ತಪ್ರತಿಶಾಸ್ತ್ರ
- ಕನ್ನಡ ಸಂಶೋಧನಶಾಸ್ತ್ರ
- ಕನ್ನಡ ಸ್ಥಳನಾಮವಿಜ್ಞಾನ ಗ್ರಂಥಸಂಪಾದನೆ
- ಶಿವಯೋಗ ಪ್ರದೀಪಿಕಾ
- ಕೊಂಡಗುಳಿ ಕೇಶಿರಾಜನ ಕೃತಿಗಳು
- ಬಸವಣ್ಣನ ಟೀಕಿನ ವಚನಗಳು
- ಸಿರುಮನಾಯಕನ ಸಾಂಗತ್ಯ ಪ್ರಶಸ್ತಿ-ಪುರಸ್ಕಾರ
- ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ ಜಾನಪದ ಪ್ರಶಸ್ತಿ
- ರಾಜ್ಯ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ,
- ರಾಜ್ಯೋತ್ಸವ ಪ್ರಶಸ್ತಿ
- ಪಂಪ ಪ್ರಶಸ್ತಿ, ವರ್ಧಮಾನ ಪ್ರಶಸ್ತಿ
- 2006ನೆಯ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಅಭಿನಂದನೆ
- ಕಲಬುರ್ಗಿ-60 ಮತ್ತು ಮಹಾಮಾರ್ಗ ಸಲ್ಲಿಸಿರುವ ಅಭಿನಂದನ ಗ್ರಂಥ
Advertisement