

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಹುಟ್ಟುಹಬ್ಬದ ದಿನವಾದ ಬುಧವಾರ ಅವರಿಗೆ ಶುಭ ಕೋರಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಸೋನಿಯಾ ಅವರು ದೇಶಕ್ಕಾಗಿ ಬಹಳಷ್ಟು ಸೇವೆ ಸಲ್ಲಿದ್ದಾರೆ ಎಂದು ಪ್ರಶಂಸಿಸಿದ್ದಾರೆ.
"ನಿಮ್ಮ ಹುಟ್ಟುಹಬ್ಬಕ್ಕೆ ನಮ್ಮ ಅಭಿನಂದನೆಗಳು ಮತ್ತು ಶುಭಾಶಯಗಳು. ನಿಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ದೇಶಕ್ಕಾಗಿ ಅಗಾಧ ಸೇವೆ ಸಲ್ಲಿಸಿದ್ದೀರಿ" ಎಂದು ರಾಷ್ಟ್ರಾಧ್ಯಕ್ಷ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಜೀವನದ ಎಲ್ಲ ಆಯಾಮಗಳಲ್ಲು ಅವರು ಅಧಿಕ ಸೇವೆ ಸಲ್ಲಿಸಿದ್ದಾರೆ ಎಂದು ಕೂಡ ಪ್ರಣಬ್ ಹೇಳಿದ್ದಾರೆ.