

ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರೊಂದಿಗೆ ಮಾತುಕತೆ ನಡೆಸಿದ ವೇಳೆ ಭಾರತ ತ್ರಿವರ್ಣ ಧ್ವಜ ಇಲ್ಲದಿರುವುದು ತೀವ್ರ ವಿವಾದಕ್ಕೆ ಕಾರಣವಾಗಿತ್ತು.
ಈ ಬಗ್ಗೆ ಇಂದು ಸ್ಪಷ್ಟನೆ ನೀಡಿರುವ ಸುಷ್ಮಾ ಸ್ವರಾಜ್, ಪಾಕ್ ಪ್ರಧಾನಿ ಜೊತೆ ನಡೆದ ಸಭೆ ದ್ವಿಪಕ್ಷೀಯ ಮಾತುಕತೆ ಅಲ್ಲ. ಅದಕ್ಕೆ ಎರಡೂ ದೇಶಗಳ ಧ್ವಜ ಬೇಕಾಗುತ್ತೆ ಎಂದು ಟ್ವೀಟ್ ಮಾಡಿದ್ದಾರೆ.
ಹಾರ್ಟ್ ಆಫ್ ಏಷ್ಯಾ ಸಚಿವರ ಸಮಾವೇಶದಲ್ಲಿ ಭಾಗವಹಿಸಲು ಇಸ್ಲಾಮಾಬಾದ್‌ಗೆ ತೆರಳಿದ್ದ ಸುಷ್ಮಾ ಸ್ವರಾಜ್ ಅವರು, ಈ ವೇಳೆ ಪಾಕ್ ಪ್ರಧಾನಿ ಹಾಗೂ ವಿದೇಶಾಂಗ ವ್ಯವಹಾರಗಳ ಸಲಹೆಗಾರರಾದ ಸರ್ತೇಜ್ ಅಜೀಜ್ ಅವರೊಂದಿಗೆ ಮಾತುಕತೆ ನಡೆಸಿದ್ದರು.
ಸುಷ್ಮಾ ಸ್ವರಾಜ್ ಅವರು ಸೋಮವಾರ ಭಾರತ-ಪಾಕಿಸ್ತಾನ ಮಾತುಕತೆಯ ಬಗ್ಗೆ ಸೋಮವಾರ ಸಂಸತ್ತಿನಲ್ಲಿ ಹೇಳಿಕೆ ನೀಡಲಿದ್ದಾರೆ.