ಸಮ-ಬೆಸ ಸಂಖ್ಯೆಯ ವಾಹನ ಸಂಚಾರ: ಮೋದಿ ಸಹಕಾರ ಕೋರಿದ ಕೇಜ್ರಿವಾಲ್

ಕೆಲವು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೈಕೋಪಾಥ್ ಎಂದಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್

ನವದೆಹಲಿ: ಕೆಲವು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೈಕೋಪಾಥ್ ಎಂದಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಈಗ ರಾಷ್ಟ್ರ ರಾಜಧಾನಿಯಲ್ಲಿ ಸಮ-ಬೆಸ ಸಂಖ್ಯೆ ವಾಹನ ಸಂಚಾರ ನಿಯಮ ಜಾರಿಗೆ ಸಹಕಾರ ನೀಡುವಂತೆ ಪ್ರಧಾನಿಯನ್ನು ಕೋರಿದ್ದಾರೆ.

ಈ ಸಂಬಂಧ ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಕೇಜ್ರಿವಾಲ್, ದೆಹಲಿಯಲ್ಲಿ ವಾಯು ಮಾಲಿನ್ಯ ನಿಯಂತ್ರಿಸಲು ದೆಹಲಿ ಸರ್ಕಾರ 'ಅನಿರೀಕ್ಷಿತ' ಮತ್ತು ಒಪ್ಪಿಕೊಳ್ಳಲು ಆಗದ ನಿರ್ಧಾರವನ್ನು ತೆಗೆದುಕೊಂಡಿದೆ. ಇದರಿಂದ ಜನರು ಖಂಡಿತ ಕೆಲವು ಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಇದಕ್ಕೆ ನಾವೆಲ್ಲರೂ ಉತ್ತರಿಸಬೇಕಾಗಿದೆ ಮತ್ತು ಒಟ್ಟಾಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳೋಣ ಎಂದಿದ್ದಾರೆ.

ಈ ಸಂಬಂಧ ದೆಹಲಿ ಸರ್ಕಾರ ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡ ನಂತರವೇ ಈ ನಿಯಮವನ್ನು ಜಾರಿಗೆ ತರಲು ನಿರ್ಧರಿಸಿದೆ. ಈ ಸಂಬಂಧ ಒಂದು ನೀಲನಕ್ಷೆಯನ್ನು ಸಿದ್ಧಪಡಿಸಲಾಗಿದೆ ಮತ್ತು ಈಗಾಗಲೇ ಆಟೋ, ಕ್ಯಾಬ್, ಸಾರ್ವಜನಿಕ ಸಾರಿಗೆ, ಅಂಬುಲೇನ್ಸ್ ಹಾಗೂ ತುರ್ತು ಸೇವೆಗಳನ್ನು ನಿಯಮದಿಂದ ವಿನಾಯ್ತಿ ನೀಡಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ ಜನವರಿ 1ರಿಂದ ಸಮ-ಬೆಸ ಸಂಖ್ಯೆಯ ನಿಯಮ ಜಾರಿಗೆ ಬರಲಿದ್ದು, ನಿಮ್ಮ ಸಂಪುಟ ಸಹೋದ್ಯೋಗಿಗಳು ಹಾಗೂ ಅಧಿಕಾರಿಗಳಿಗೆ ಸಹಕರಿಸುವಂತೆ ಸೂಚಿಸಿ ಎಂದು ದೆಹಲಿ ಸಿಎಂ ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com