
ನವದೆಹಲಿ: ದೆಹಲಿ ಕ್ರಿಕೆಟ್ ಮಂಡಲಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಆರೋಪ ಮಾಡಿದವರನ್ನೇ ಪಕ್ಷದಿಂದ ಉಚ್ಛಾಟಿಸುವ ಮೂಲಕ ಬಿಜೆಪಿ ಪಕ್ಷ ತನ್ನ ಬಣ್ಣ ಬಯಲು ಮಾಡಿಕೊಂಡಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ.
"ಕೀರ್ತಿ ಆಜಾದ್ ಮಾಡಿದ ತಪ್ಪೆಂದರೆ ಅವರು ಭ್ರಷ್ಟಾಚಾರದ ವಿರುದ್ಧ ತಮ್ಮ ದನಿಯೆತ್ತಿದರು. ಇಂದು ಬಿಜೆಪಿ ಬಣ್ಣ ಬಯಲಾಗಿದೆ. ಬಿಜೆಪಿ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ" ಎಂದು ಆಮ್ ಆದ್ಮಿ ಪಕ್ಷದ ನೇತಾರ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಮಂಡಲಿಯ ಅಧ್ಯಕ್ಷರಾಗಿದ್ದಾಗ ಭಾರಿ ಅವ್ಯವಹಾರ ನಡೆದಿತ್ತು ಎಂದು ಆರೋಪಿಸಿದ್ದ ಬಿಜೆಪಿ ಸಂಸದ ಕೀರ್ತಿ ಆಜಾದ್ ಅವರನ್ನು ಪಕ್ಷ ಇಂದು ಉಚ್ಛಾಟಿಸಿದೆ.
Advertisement