ಚೆನ್ನೈ: ಸಿನಿಮಾ ಹಾಡೊಂದರಲ್ಲಿ ಮಹಿಳೆಯರಿಗೆ ಅಪಮಾನ ಮಾಡಿದ ಆರೋಪ ಎದುರಿಸುತ್ತಿರುವ ಕಾಲಿವುಡ್ ಖ್ಯಾತ ನಟ ಸಿಂಬು ಅವರಿಗೆ ಈಗ ಬಂಧನ ಬೀತಿ ಎದುರಾಗಿದ್ದು, ನಟನಿಗಾಗಿ ಪೊಲೀಸರು ಶೋಧ ಕಾರ್ಯಾ ಆರಂಭಿಸಿದ್ದಾರೆ.
ಮಹಿಳೆಯರಿಗೆ ಅಪಮಾನ ಮಾಡಿದ ಆರೋಪದ ಮೇಲೆ ತಮ್ಮ ವಿರುದ್ಧ ಎಫ್ಐಆರ್ ದಾಖಲಾದ ಬಳಿಕ ಸಿಂಬು ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದು, ನಟನ ಬಂಧನಕ್ಕಾಗಿ ಚೆನ್ನೈ ಪೊಲೀಸರು ಎರಡು ವಿಶೇಷ ತಂಡಗಳನ್ನು ರಚಿಸಿ, ಹುಟುಕಾಟ ಆರಂಭಿಸಿದ್ದಾರೆ.
ಈ ಮಧ್ಯೆ, ಸಿಂಬು ಬೆಂಗಳೂರಿನಲ್ಲಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ ಎನ್ನಲಾಗಿದೆ.
ಸಿಂಬು ಅವರು ಹಾಡಿದ ಲವ್ ಸಾಂಗ್‌ನಲ್ಲಿ ಮಹಿಳೆಯರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆಂದು ಆರೋಪಿಸಿ ಚೆನ್ನೈ ಹಾಗೂ ಕೊಯಮತ್ತೂರಿನಲ್ಲಿ ಮಹಿಳಾ ಸಂಘಟನೆಗಳು ದೂರು ದಾಖಲಿಸಿದ್ದವು.
ಸಿಂಬು ಅವರ ಜೊತೆಗೆ ಈ ಹಾಡಿಗೆ ಸಂಗೀತ ನಿರ್ದೇಶನ ಮಾಡಿರುವ ಕೊಲವೆರಿ ಡಿ ಖ್ಯಾತಿಯ ಅನಿರುದ್ಧ್ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಹಾಡಿನಲ್ಲಿ ಅಶ್ಲೀಲ ಪದಗಳನ್ನು ಬಳಸಲಾಗಿದ್ದು, ಅವು ಹೆಣ್ಣುಮಕ್ಕಳ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿವೆ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಮಹಿಳೆಯರ ಸಮಿತಿ ದೂರು ನೀಡಿದೆ.