ಪ್ರಧಾನ ಸುದ್ದಿ

ಬಿಹಾರ ಚುನಾವಣೆಯಲ್ಲಿ ಸೋಲು: ಎನ್ ಡಿಎ ಮೈತ್ರಿಕೂಟದಿಂದ ಹೊರಬರಲು ಹೆಚ್ಎಎಂ ಚಿಂತನೆ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿ ಎ ಮೈತ್ರಿಕೂಟದೊಂದಿಗೆ ಗುರುತಿಸಿಕೊಂಡಿದ್ದ ಹಿಂದೂಸ್ತಾನಿ ಅವಾಂ ಮೋರ್ಚಾ (ಹೆಚ್ಎಎಂ) ಈಗ ಮೈತ್ರಿಕೂಟದಿಂದ ಹೊರಬರಲು ನಿರ್ಧರಿಸಿದೆ.

ಬಿಹಾರ ಚುನಾವಣೆಯಲ್ಲಿ ಸೋಲು: ಎನ್ ಡಿಎ ಮೈತ್ರಿಕೂಟದಿಂದ ಹೊರಬರಲು ಹೆಚ್ಎಎಂ ಚಿಂತನೆ
ಹೆಚ್ಎಎಂ ನಾಯಕ ಜಿತನ್ ರಾಮ್ ಮಾಂಜಿ
Published On :

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿ ಎ ಮೈತ್ರಿಕೂಟದೊಂದಿಗೆ ಗುರುತಿಸಿಕೊಂಡಿದ್ದ ಹಿಂದೂಸ್ತಾನಿ ಅವಾಂ ಮೋರ್ಚಾ (ಹೆಚ್ಎಎಂ) ಈಗ ಮೈತ್ರಿಕೂಟದಿಂದ ಹೊರಬರಲು ನಿರ್ಧರಿಸಿದೆ.
ಎನ್ ಡಿಎ ಮೈತ್ರಿಕೂಟದಿಂದ ಹೊರಬರುವುದರ ಬಗ್ಗೆ ಪಕ್ಷದ ಸದಸ್ಯರೊಂದಿಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಹೆಚ್ ಎ ಎಂ ರಾಜ್ಯಾಧ್ಯಕ್ಷ ಬ್ರಿಶೇನ್ ಪಟೇಲ್ ಮಾಹಿತಿ ನೀಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿ ಎ ಮೈತ್ರಿಕೂಟದಲ್ಲಿ ಗುರುತಿಸಿಕೊಂಡ ಪರಿಣಾಮ ಹೆಚ್ ಎ ಎಂ ಮುಸ್ಲಿಂ ಮತಗಳನ್ನು ಕಳೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಎನ್ ಡಿಎಯೊಂದಿಗೆ ಮುಂದುವರೆಯುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದ್ದು ಮೈತ್ರಿಕೂಟ ತೊರೆಯುವ ಬಗ್ಗೆ ಪಕ್ಷದಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಬ್ರಿಶೇನ್ ಪಟೇಲ್ ತಿಳಿಸಿದ್ದಾರೆ.
ಮುಸ್ಲಿಮರು ಎನ್ ಡಿಎ ಯೊಂದಿಗಿಲ್ಲ, ಎನ್ ಡಿಎ ಮೈತ್ರಿಕೂಟಕ್ಕೆ ಎಂದಿಗೂ ಬೆಂಬಲ ನೀಡುವುದಿಲ್ಲ.ಚುನಾವಣೆಗಳಲ್ಲಿ ಮುಸ್ಲಿಮರು ನಿರ್ಣಾಯಕ ಪಾತ್ರ ವಹಿಸುವುದರಿಂದ ಎನ್ ಡಿಎ ಮೈತ್ರಿಕೂಟದಿಂದ ಹೊರಬರುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದಿದ್ದಾರೆ ಪಟೇಲ್. ಆದರೆ ಈ ಬಗ್ಗೆ ಹೆಚ್ ಎ ಎಂ ಮುಖಂಡ, ಬಿಹಾರ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಜಿ ಪ್ರತಿಕ್ರಿಯೆ ನೀಡಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.