ಸುಬ್ರಮಣ್ಯನ್ ಸ್ವಾಮಿ
ಪ್ರಧಾನ ಸುದ್ದಿ
ಅಮಾನತುಗೊಂಡ ಕೀರ್ತಿ ಆಜಾದ್‌ಗೆ ಸುಬ್ರಮಣ್ಯಯನ್ ಸ್ವಾಮಿ ಬೆಂಬಲ
ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಪಕ್ಷದಿಂದ ಅಮಾನತುಗೊಂಡಿರುವ ಮಾಜಿ ಕ್ರಿಕೆಟಿಗ...
ನವದೆಹಲಿ: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಪಕ್ಷದಿಂದ ಅಮಾನತುಗೊಂಡಿರುವ ಮಾಜಿ ಕ್ರಿಕೆಟಿಗ ಹಾಗೂ ಬಿಜೆಪಿ ಸಂಸದ ಕೀರ್ತಿ ಆಜಾದ್ ಅವರಿಗೆ ಬಿಜೆಪಿ ನಾಯಕ ಸುಬ್ರಮಣ್ಯಯನ್ ಸ್ವಾಮಿ ಬೆಂಬಲ ನೀಡಿದ್ದಾರೆ.
'ನನಗೆ ಅಮಾನತು ನೋಟಿಸ್ ಬಂದಿದ್ದು, ಅದಕ್ಕೆ ಪ್ರತಿಕ್ರಿಯಿಸುತ್ತೇನೆ. ಈ ಕುರಿತು ಯಾವ ರೀತಿ ಪ್ರತಿಕ್ರಿಯೆ ನೀಡಬೇಕು ಎಂಬುದರ ಬಗ್ಗೆ ಸುಬ್ರಮಣ್ಯಯನ್ ಸ್ವಾಮಿ ನನಗೆ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ' ಎಂದು ಕೀರ್ತಿ ಆಜಾದ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಸತ್ಯ ಹೇಳುವುದೇ ತಪ್ಪು ಎನ್ನುವಾದದರೆ ನಾನು ಪದೇಪದೆ ಅದೇ ತಪ್ಪನ್ನು ಮಾಡುತ್ತೇನೆ ಎಂದಿರುವ ಕೀರ್ತಿ ಆಜಾದ್, ಪ್ರಧಾನಿ ಮೋದಿ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.
ಡಿಡಿಸಿಎ ಹಗರಣ ಸಂಬಂಧ ಅರುಣ್ ಜೇಟ್ಲಿ ಅವರ ವಿರುದ್ಧ ಬಹಿರಂಗ ಆರೋಪ ಮಾಡಿದ್ದ ಕೀರ್ತಿ ಆಜಾದ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ನಿನ್ನೆ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿತ್ತು.

