ಶಿವಮೊಗ್ಗದಲ್ಲಿ ಬೆಂಗಳೂರಿಗೆ ಹಾಗೂ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗಳ ನಡುವೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಬಿದರೆಗುಡಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ನಾಲ್ವರು ಪುರುಷರು ಸೇರಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಳಿದಂತೆ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳು ಜಿಲ್ಲಾಸ್ಪತ್ರೆ ಹಾಗೂ ಬೆಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.