
ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸುವ ವೇಳೆ ಮೇಯರ್ ಮಂಜುನಾಥ್ ರೆಡ್ಡಿ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂದು ಆರೋಪಿಸಿ ವಕೀಲ ಅಮೃತೇಶ್ ಎಸಿಎಂಎಂ ಕೋರ್ಟ್ ನಲ್ಲಿ ದೂರು ಸಲ್ಲಿಸಿದ್ದಾರೆ.
ಮಂಜುನಾಥ್ ರೆಡ್ಡಿ ಚುನಾವಣೆಗೆ ಸ್ಪರ್ಧಿಸುವ ವೇಳೆ ನಾನು ಪಾನ್ ಕಾರ್ಡ್ ಹೊಂದಿಲ್ಲ. ಕಂದಾಯ ಕಟ್ಟಿಲ್ಲ ಎಂದು ಸುಳ್ಳು ಪ್ರಮಾಣಪತ್ರ ನೀಡಿ ಚು. ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ. ಆದರೆ, ರೆಡ್ಡಿ ಅವರು ಪಾವಗಡ ಸಹಕಾರಿ ಬ್ಯಾಂಕ್ ನಲ್ಲಿ 28 ಲಕ್ಷ ಹಾಗೂ ಐಸಿಐಸಿಐ ಬ್ಯಾಂಕ್ ನಲ್ಲಿ 5 ಲಕ್ಷ ಪಡೆದಿದ್ದಾರೆ.
ಈ ಕುರಿತು ಕೇಂದ್ರ ಹಾಗೂ ರಾಜ್ಯ ಚು.ಆಯೋಗಕ್ಕೆ ದೂರು ನೀಡಿದ್ದರೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮೇಯರ್ ವಿರುದ್ಧ ಕೋರ್ಟ್ ಲ್ಲಿ ದೂರು ಸಲ್ಲಿಸಿದ್ದಾರೆ. ಈ ಪ್ರಕರಣದ ವಿಚಾರಣೆ ಡಿ.30ರಂದು ನಡೆಯಲಿದೆ.
Advertisement