ಬೆಂಗಳೂರಿನಿಂದ ಮುಂಬೈಗೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಪಲ್ಟಿ: 4 ಸಾವು

ಬೆಂಗಳೂರಿನಿಂದ ಮುಂಬೈಗೆ ಹೊರಟಿದ್ದ ಕೆಎಸ್ಆರ್ಟಿಸಿ ವೋಲ್ವಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ನಾಲ್ವರು ಸಾವನ್ನಪ್ಪಿದ್ದಾರೆ...
ಕೆಎಸ್ಆರ್ಟಿಸಿ
ಕೆಎಸ್ಆರ್ಟಿಸಿ

ಚಿತ್ರದುರ್ಗ: ಬೆಂಗಳೂರಿನಿಂದ ಮುಂಬೈಗೆ ಹೊರಟಿದ್ದ ಕೆಎಸ್ಆರ್ಟಿಸಿ ವೋಲ್ವಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ನಾಲ್ವರು ಸಾವನ್ನಪ್ಪಿದ್ದಾರೆ.

ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ ಭೀಶಾರ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ಹೊಡೆದಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಇನ್ನುಳಿದಂತೆ 20 ಮಂದಿಗೆ ಗಂಭೀರ ಗಾಯಗಳಾಗಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ಮಹಾರಾಷ್ಟ್ರ ಮೂಲದ ವೈದ್ಯೆ ಶ್ವೇತಶ್ರೀ (24) ಸತೀಶ್ ದತ್ತಾತ್ರೇಯ (60), ರೋಹನ್ ನಾಯ್ಕ್ (28), ಮುರುಗನಾಥನ್ ಎಂದು ಗುರುತಿಸಲಾಗಿದೆ. ಚಿತ್ರದುರ್ಗದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com