ಎಚ್.ಡಿ.ದೇವೇಗೌಡ
ಪ್ರಧಾನ ಸುದ್ದಿ
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಬಿಟ್ಟುಕೊಡಲು ಸಿದ್ಧ: ದೇವೇಗೌಡ
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಬಿಟ್ಟು ಕೊಡಲು ತಾವು ಸಿದ್ಧರಿರುವುದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸೋಮವಾರ ಹೇಳಿದ್ದಾರೆ.
ಚಿತ್ರದುರ್ಗ: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಬಿಟ್ಟು ಕೊಡಲು ತಾವು ಸಿದ್ಧರಿರುವುದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸೋಮವಾರ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡರು, ತಾವು ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಬಿಟ್ಟುಕೊಡಲು ಸಿದ್ಧವಿದ್ದು, ಪಕ್ಷದಲ್ಲಿ ಯಾರಾದರೂ ಆಕಾಂಕ್ಷಿಗಳಿದ್ದರೆ ಅಥವಾ ನೊಂದಿರುವ ಶಾಸಕರು ನೇರವಾಗಿ ಬಂದು ನನ್ನೊಂದಿಗೆ ಚರ್ಚಿಸಲಿ. ನಾನು ಅಧ್ಯಕ್ಷ ಸ್ಥಾನ ತೊರೆಯುತ್ತೆನೆ. ಆದರೆ ಬೇಸರಗೊಂಡ ಶಾಸಕರು ದೆಹಲಿಗೆ ಹೋಗುವುದು ಬೇಡ ಎಂದು ಹೇಳಿದ್ದಾರೆ.
ಇದೇ ವೇಳೆ ಮುಂದಿನ ಲೋಕಸಭಾ ಚುನಾವಣೆಗೆ ತಾವು ಸ್ಪರ್ಧಿಸುವುದಿಲ್ಲ ಸ್ಪಷ್ಟಪಡಿಸಿದ ದೇವೇಗೌಡರು, ಯುವಕರಿಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ತಾವು ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ