ಪ್ರಧಾನ ಸುದ್ದಿ

ಕೇಜ್ರಿವಾಲ್ ಸದಾ ಸುದ್ದಿಯಲ್ಲಿರಲು ಬಯಸುತ್ತಾರೆ: ಕಿರಣ್‌ಬೇಡಿ

ಕೇಜ್ರಿವಾಲ್ ಸದಾ ಸುದ್ದಿಯಲ್ಲಿರಲು ಬಯಸುತ್ತಾರೆ: ಕಿರಣ್‌ಬೇಡಿ
ಕಿರಣ್ ಬೇಡಿ
Published On :

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ನಕಾರಾತ್ಮಕವಾಗಿ ಮಾತನಾಡುತ್ತಾರೆ. ಈ ಮೂಲಕ ಅವರು ಸದಾ ಸುದ್ದಿಯಲ್ಲಿರಲು ಬಯಸುತ್ತಾರೆ ಎಂದು ದೆಹಲಿ ಬಿಜೆಪಿ ಅಭ್ಯರ್ಥಿ ಕಿರಣ್ ಬೇಡಿ ಹೇಳಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಕೇಜ್ರಿವಾಲ್ ವಿರುದ್ಧ ಟೀಕಾ ಪ್ರಹಾರ ಮಾಡಿದ ಬೇಡಿ, ನಕಾರಾತ್ಮಕ ವಿಷಯಗಳು ಅವರಿಗೆ ಒಪ್ಪುತ್ತವೆ. ಅವರು ನಕಾರಾತ್ಮಕ ವಿಷಯಗಳನ್ನು ನಂಬುತ್ತಾರೆ. ಇಲ್ಲವಾದರೆ ಅವರು ಮಾಧ್ಯಮದವರ ಗಮನ ಸೆಳೆಯುವುದಾದರೂ ಹೇಗೆ? ಎಂದು ಕೇಜ್ರಿ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದಾರೆ.

ನಿನ್ನೆ ಪ್ರಚಾರ ಕಾರ್ಯಕ್ರಮದಲ್ಲಿ ನಾನು ತಪ್ಪಿತಸ್ಥನಾಗಿದ್ದರೆ ಸರ್ಕಾರ ನನ್ನನ್ನು ಬಂಧಿಸಲಿ ಎಂದು ಕೇಜ್ರಿವಾಲ್ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಕಿರಣ್ ಬೇಡಿ, ಕೇಜ್ರಿವಾಲ್ ಅವರ ಈ ಹೇಳಿಕೆಯಿಂದ ನನಗೇನೂ ಅಚ್ಚರಿಯಾಗಿಲ್ಲ, ಹಳೇ ಬುದ್ಧಿ ಎಂದೂ ಹೋಗುವುದಿಲ್ಲ ಎಂದಿದ್ದಾರೆ.  ಅದೇ ವೇಳೆ ಕೇಜ್ರಿವಾಲ್ ತಂತ್ರಕ್ಕೆ ಯಾರೂ ಬಲಿಯಾಗಬೇಡಿ ಎಂದು ಕಿರಣ್ ಬೇಡಿ ದೆಹಲಿ ಜನರಿಗೆ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.