ದೆಹಲಿ ಸಮರ: ಮತದಾನ ಆರಂಭ

ದೇಶಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ರಾಷ್ಟ್ರರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಆರಂಭವಾಗಿದ್ದು, ತೀವ್ರ ಚಳಿಯ ನಡುವೆಯೇ ದೆಹಲಿ ಜನತೆ ಮತದಾನ ಮಾಡುತ್ತಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಆರಂಭ(ಸಂಗ್ರಹ ಚಿತ್ರ)
ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಆರಂಭ(ಸಂಗ್ರಹ ಚಿತ್ರ)
Updated on: 

ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ರಾಷ್ಟ್ರರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಆರಂಭವಾಗಿದ್ದು, ತೀವ್ರ ಚಳಿಯ ನಡುವೆಯೇ ದೆಹಲಿ ಜನತೆ ಮತದಾನ ಮಾಡುತ್ತಿದ್ದಾರೆ.

ಒಟ್ಟು 70 ವಿಧಾನಸಭಾ ಕ್ಷೇತ್ರಗಳನ್ನು ದೆಹಲಿ ಹೊಂದಿದ್ದು, ಕೇಂದ್ರ ಚುನಾವಣಾ ಆಯೋಗ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಮತದಾನಕ್ಕಾಗಿ ಒಟ್ಟು 12 ಸಾವಿರ ಮತಗಟ್ಟೆಗಳನ್ನು ಏರ್ಪಾಟು ಮಾಡಲಾಗಿದ್ದು, ಭದ್ರತೆಗಾಗಿ ಒಟ್ಟು 80 ಸಾವಿರ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಇನ್ನು ಪ್ರಸಕ್ತ ಚುನಾವಣೆಯನ್ನು ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷದ ನಡುವಿನ ನೇರಹಣಾಹಣಿ ಎಂದು ಬಿಂಬಿಸಲಾಗುತ್ತಿದ್ದು, ಈ ಹಿಂದೆ ಇದೇ ದೆಹಲಿಯಲ್ಲಿ 15 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷದ ಸ್ಥಿತಿ ಆಟಕುಂಟು ಲೆಕ್ಕಕ್ಕಿಲ್ಲದಂತಾಗಿದೆ.

ಆಮ್ ಆದ್ಮಿ ಪಕ್ಷ, ಬಿಜೆಪಿಯ ಕಿರಣ್ ಬೇಡಿ ಮತ್ತು ನರೇಂದ್ರ ಮೋದಿ ಅಬ್ಬರದ ನಡುವೆ ಕಾಂಗ್ರೆಸ್ ಸಂಪೂರ್ಣ ಮೂಲೆಗುಂಪಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com