ದೆಹಲಿ ಸೋಲು: ಹಿರಿಯ ಸಂಪುಟ ಸಚಿವರ ಜೊತೆ ಮೋದಿ ಸಭೆ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಆಘಾತಕಾರಿ ಸೋಲಿನ ಹಿನ್ನಲೆಯಲ್ಲಿ ಪಕ್ಷದ ಹಿರಿಯ ಸಂಪುಟ
ನರೇಂದ್ರ ಮೋದಿ ಮತ್ತು ಕಿರಣ್ ಬೇಡಿ (ಸಂಗ್ರಹ ಚಿತ್ರ)
ನರೇಂದ್ರ ಮೋದಿ ಮತ್ತು ಕಿರಣ್ ಬೇಡಿ (ಸಂಗ್ರಹ ಚಿತ್ರ)

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಆಘಾತಕಾರಿ ಸೋಲಿನ ಹಿನ್ನಲೆಯಲ್ಲಿ ಪಕ್ಷದ ಹಿರಿಯ ಸಂಪುಟ ಸಚಿವರ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಭೆ ನಡೆಸಿದರು.

ಮಂಗಳವಾರ ಕೇಂದ್ರ ಸಂಪುಟ ಸಭೆ ಮುಗಿದ ನಂತರ ಪ್ರಧಾನಿ ನರೇಂದ್ರ ಮೋದಿ, ವಿತ್ತ ಸಚಿವ ಅರುಣ್ ಜೇಟ್ಲಿ, ಗೃಹ ಸಚಿವ ರಾಜನಾಥ್ ಸಿಂಗ್, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತ ಕುಮಾರ್, ಸಂಸದೀಯ ವ್ಯವಹಾರಗಳ ಸಚಿವ ಎಂ ವೆಂಕಯ್ಯ ನಾಯ್ಡು ಮತ್ತು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ತವಾರ್ ಚಾಂದ್ ಗೆಲ್ಹೋಟ್ ಜೊತೆ ಒಂದೂವರೆ ಘಂಟೆಯ ಸಭೆ ನಡೆಸಿದರು.

ಸಭೆಯಲ್ಲಿ ನಡೆದ ಚರ್ಚೆಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ತಿಳಿದುಬಂದಿಲ್ಲ.

ಫೆಬ್ರವರಿ ೨೩ ರಂದು ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, ವಿರೋಧ ಪಕ್ಷಗಳು ಈ ದೆಹಲಿ ಸೋಲಿನ ಬಗ್ಗೆ ಸರ್ಕಾರವನ್ನು ಲೋಕಸಭೆಯಲ್ಲಿ ಪ್ರಶ್ನಿಸುವ ಸಾಧ್ಯತೆ ಇದೆ.

ಸಂಪುಟ ಸಭೆಗೂ ಮುಂಚೆ ಮಾತನಾಡಿದ ನೀರು ಸಂಪನ್ಮೂಲ ಸಚಿವೆ ಉಮಾ ಭಾರತಿ ಬಿಜೆಪಿ ದೇಶದ ಎಲ್ಲ ಚುನಾವಣೆಗಳನ್ನು ಗೆಲ್ಲಬೇಕು ಎಂದು ನಿರೀಕ್ಷಿಸುವುದು "ಊಳಿಗಮಾನ್ಯ ಮನಸ್ಥಿತಿ" ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com