ಕೇಜ್ರಿವಾಲ್-ಮೋದಿ ಭೇಟಿ: ಪ್ರಮಾಣವಚನ ಸಮಾರಂಭಕ್ಕೆ ಮೋದಿ ಬರಲ್ಲ

೭, ರೇಸ್ ಕೋರ್ಸ್ ರಸ್ತೆ, ಪ್ರಧಾನಮಂತ್ರಿ ಅವರ ಅಧಿಕೃತ ನಿವಾಸದಲ್ಲಿ ಇಂದು ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.
ಅರವಿಂದ್ ಕೇಜ್ರಿವಾಲ್ ಮತ್ತು ನರೇಂದ್ರ ಮೋದಿ ಭೇಟಿ
ಅರವಿಂದ್ ಕೇಜ್ರಿವಾಲ್ ಮತ್ತು ನರೇಂದ್ರ ಮೋದಿ ಭೇಟಿ
Updated on: 

ನವದೆಹಲಿ: ೭, ರೇಸ್ ಕೋರ್ಸ್ ರಸ್ತೆ, ಪ್ರಧಾನಮಂತ್ರಿ ಅವರ ಅಧಿಕೃತ ನಿವಾಸದಲ್ಲಿ ಇಂದು ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ದೆಹಲಿಯ ವಿಧಾನಸಭಾ ಚುನಾವಣೆಯ ಅಭೂತಪೂರ್ವ ಗೆಲುವಿನ ನಂತರ ಇದು ಪ್ರಧಾನಿಯವರ ಜೊತೆಗಿನ ಮೊದಲ ಸೌಹಾರ್ದಯುತ ಭೇಟಿ. ಈ ಭೇಟಿಯಲ್ಲಿ ದೆಹಲಿಯ ಉಪಮುಖ್ಯಮಂತ್ರಿ ನಾಮಾಂಕಿತ ಮನೀಶ್ ಸಿಸೋದಿಯಾ ಅರವಿಂದ್ ಕೇಜ್ರಿವಾಲ್ ಅವರ ಜೊತೆಗಿದ್ದರು ಎಂದು ತಿಳಿದುಬಂದಿದೆ.

ಫೆಬ್ರವರಿ ೧೪ ರ ಪ್ರಮಾಣವಚನ ಸಮಾರಂಭಕ್ಕೆ ಪ್ರಧಾನಿ ಅವರಿಗೆ ಆಹ್ವಾನ ನೀಡಿದ್ದರೂ, ಹಿಂದಿನ ನಿಗದಿತ ಕಾರ್ಯಕ್ರಮಗಳು ಮತ್ತು ಭದ್ರತೆಯ ಸಲುವಾಗಿ ಪ್ರಧಾನಿ ಅವರು ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿದುಬಂದಿದೆ.

ಭೇಟಿಯ ನಂತರ ವರದಿಗಾಗರೊಂದಿಗೆ ಮಾತನಾಡಿದ ಮನೀಶ್ ಸಿಸೋದಿಯಾ, ಪ್ರಧಾನಿ ಅವರು ಫೆಬ್ರವರಿ ೧೪ ರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬರುತ್ತಿಲ್ಲ ಎಂದು ತಿಳಿಸಿದ್ದಾರೆ. ನಾವು ದೆಹಲಿಗೆ ರಾಜ್ಯ ಸ್ಥಾನಮಾನ ನಿಡುವ ಬೇಡಿಕೆಯನ್ನು ಇಟ್ಟಿದ್ದೇವೆ. ಇದರ ಬಗ್ಗೆ ಚಿಂತಿಸುವುದಾಗಿ ಮೋದಿ ತಿಳಿಸಿದ್ದಾರೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com