ಸಿದ್ದು ಯೂ ಟರ್ನ್: ಮತ್ತೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದ ಸಿಎಂ

ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವುದಾಗಿ ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಯೂ ಟರ್ನ್ ಹೊಡೆದಿದ್ದಾರೆ. ಮುಂಬರುವ...
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 

ಬೆಂಗಳೂರು: ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವುದಾಗಿ ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಯೂ ಟರ್ನ್ ಹೊಡೆದಿದ್ದಾರೆ. ಮುಂಬರುವ 2018ರ ಚುನಾವಣೆಯಲ್ಲಿ ಮತ್ತೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಾಗಿ ಶುಕ್ರವಾರ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನನ್ನ ಸರ್ಕಾರದಲ್ಲಿ ಸಣ್ಣ ಪುಟ್ಟ ದೋಷಗಳಿವೆ. ಆದರೂ ನಮ್ಮ ಸರ್ಕಾರ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣೆ ಸಂದರ್ಭದಲ್ಲಿ ನಾವು 165 ಭರವಸೆಗಳನ್ನು ನೀಡಿದ್ದೇವು. ಅದರಲ್ಲಿ 95 ಭರವಸೆಗಳನ್ನು ಈಗಾಗಲೇ ಈಡೇರಿಸಿದ್ದೇವೆ. ಆದರೆ ಪ್ರಚಾರದ ಹುಚ್ಚು ಹಿಡಿಸಿಕೊಂಡು ನಾವು ಆಡಳಿತ ನಡೆಸುತ್ತಿಲ್ಲ. ನಮ್ಮಲ್ಲಿ ಪ್ರಚಾರ ಇಲ್ಲದಿರುವುದೇ ಒಂದು ದೋಷ ಎಂದರು. ಅಲ್ಲದೆ ನಾನು ಒಬ್ಬ ಕಾಂಗ್ರೆಸ್ ವ್ಯಕ್ತಿ. ಮುಂದಿನ ಚುನಾವಣೆಗೆ ಮತ್ತೆ ಸ್ಪರ್ಧಿಸುತ್ತೇನೆ ಎಂದರು.

ದಲಿತರು ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂಬ ಕೂಗಿನ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ದಲಿತರು ಮುಖ್ಯಮಂತ್ರಿಯಾಗುವ ಅವಕಾಶ ಕಾಂಗ್ರೆಸ್‌ನಲ್ಲಿ ಮಾತ್ರ ಇದೆ. ಅಂತಹ ಸಿದ್ಧಾಂತ ಇರುವುದು ಕಾಂಗ್ರೆಸ್‌ನಲ್ಲಿ ಮಾತ್ರ. ಸಾಮಾಜಿಕ ನ್ಯಾಯದ ಬಗ್ಗೆಯಾಗಲಿ ಅಥವಾ ಇತರೆ ವಿಚಾರಗಳ ಬಗ್ಗೆ ನಾನು ಬಿಜೆಪಿಯಿಂದ ಪಾಠ ಕಲಿಯಬೇಕಾಗಿಲ್ಲ ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com