

ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಟೀಂ ಇಂಡಿಯಾ ಆಟಗಾರರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಉತ್ತಮವಾಗಿ ಆಡಿದ್ದೀರಿ. ಭಾರತಕ್ಕೆ ಹೆಮ್ಮೆ ತರುವ ರೀತಿಯಲ್ಲಿ ಆಡಿದ್ದೀರಿ ಎಂದು ಭಾರತ ಗೆದ್ದ ಮರು ಕ್ಷಣವೇ ಟ್ವೀಟ್ ಮಾಡಿದ್ದಾರೆ.
ವ್ಹಾ! ಮನವೊಲಿಸುವ ಜಯ. ಇದನ್ನು ಈಗೆ ಮುಂದುವರೆಸಿ ಎಂದು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಟ್ವೀಟ್ ಮಾಡಿದ್ದಾರೆ.
ಟೀಂ ಇಂಡಿಯಾದ ಐತಿಹಾಸಿಕ ಗೆಲುವಿಗೆ ನನ್ನ ಅಭಿನಂದನೆಗಳು ಭಾರತದ ಪ್ರಖ್ಯಾತ ಗಾಯಕಿ ಲತಾ ಮಂಗೆಷ್ಕರ್ ಅವರು ಟ್ವೀಟ್ ಮಾಡಿದ್ದಾರೆ.
ಅಡಿಲೇಡ್ ಓವಲ್ ಮೈದಾನದಲ್ಲಿ ನಡೆದ ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಕ್ ವಿರುದ್ಧ ಭಾರತ ಭರ್ಜರಿ ಜಯ ಗಳಿಸಿ ಶುಭಾರಂಭ ಮಾಡಿದೆ.ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಕದನ ಅಂತ್ಯಗೊಂಡಿದೆ. ಪಾಕ್ ವಿರುದ್ಧ ಭಾರತ 76 ರನ್ ಗಳ ಅಂತರದಲ್ಲಿ ಜಯ ಗಳಿಸಿತ್ತು.