ಮಲ್ಲಿಕಾರ್ಜುನ್ ಖರ್ಗೆ - ಪರಮೇಶ್ವರ
ಪ್ರಧಾನ ಸುದ್ದಿ
ದಲಿತ ನಾಯಕನಿಗೆ ಸಿಎಂ ಪಟ್ಟ: ಹೈಕಮಾಂಡ್ ಮೇಲೆ ಒತ್ತಡಕ್ಕೆ ನಿರ್ಧಾರ
ರಾಜ್ಯದಲ್ಲಿ ದಲಿತ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ವಾದ ತೀವ್ರ ಸ್ವರೂಪ ಪಡೆಯುತ್ತಿದ್ದು, ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ...
ಬೆಂಗಳೂರು: ರಾಜ್ಯದಲ್ಲಿ ದಲಿತ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ವಾದ ತೀವ್ರ ಸ್ವರೂಪ ಪಡೆಯುತ್ತಿದ್ದು, ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹಾಕಲು ದಲಿತ ಮುಖಂಡರು ನಿರ್ಧರಿಸಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ) ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ಮುಂದಿನ ರಾಜಕೀಯ ಭವಿಷ್ಯದ ಬಗ್ಗೆ ಚರ್ಚೆ ನಡೆಸಲು ಇಂದು ನಗರದಲ್ಲಿ 18 ದಲಿತ ಸಂಘಟನೆಗಳ ಮುಖಂಡರು ಸಭೆ ಸೇರಿದ್ದರು.
ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಖದ್ದು ಪರಮೇಶ್ವರ ಅವರೂ ಭಾಗವಹಿಸಿದ್ದು, ದಲಿತರು ಮುಖ್ಯಮಂತ್ರಿಯಾಗಬೇಕು ಎಂಬ ಕೂಗು ಸಭೆಯಲ್ಲಿ ಬಲವಾಗಿ ಕೇಳಿಬಂತು. ಅಲ್ಲದೆ ಈ ಸಂಬಂಧ ಹೈಕಮಾಂಡ್ ಮೇಲೆ ಒತ್ತಡ ಹಾಕುವ ನಿರ್ಧಾರ ತೆಗೆದುಕೊಳ್ಳಲಾಯಿತು.
ಮಾರ್ಚ್ ಅಂತ್ಯದ ಒಳಗೆ ಹೈಕಮಾಂಡ್ ಈ ಕುರಿತು ಸ್ಪಷ್ಟ ನಿರ್ಧಾರಕ್ಕೆ ಬರಬೇಕು. ಇಲ್ಲದಿದ್ದರೆ ಹೋರಾಟದ ಹಾದಿ ತುಳಿಯುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ