ಸಿಎಂ ಬದಲಿಸುವ ಯಾವ ಆಲೋಚನೆಯೂ ನಮ್ಮ ಮುಂದೆ ಇಲ್ಲ: ದಿಗ್ವಿಜಯ್ ಸಿಂಗ್

ರಾಜ್ಯದಲ್ಲಿ ದಲಿತರಿಗೆ ಮುಖ್ಯಮಂತ್ರಿ ಪಟ್ಟ ನೀಡಬೇಕು ಎಂಬ ಬೇಡಿಕೆ ಬಗ್ಗೆ ಅಚ್ಚರಿ ವ್ಯಕ್ತಪಡಿಸರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು,...
ದಿಗ್ವಿಜಯ್ ಸಿಂಗ್
ದಿಗ್ವಿಜಯ್ ಸಿಂಗ್
Updated on

ಬೆಂಗಳೂರು: ರಾಜ್ಯದಲ್ಲಿ ದಲಿತರಿಗೆ ಮುಖ್ಯಮಂತ್ರಿ ಪಟ್ಟ ನೀಡಬೇಕು ಎಂಬ ಬೇಡಿಕೆ ಬಗ್ಗೆ ಅಚ್ಚರಿ ವ್ಯಕ್ತಪಡಿಸರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾಯಿಸುವ ಯಾವ ಆಲೋಚನೆಯೂ ನಮ್ಮ ಮುಂದೆ ಇಲ್ಲ ಎಂದು ಭಾನುವಾರ ಸ್ಪಷ್ಟಪಡಿಸಿದ್ದಾರೆ.

ಇಂದು ಸಂಜೆ ದೇವನಹಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ದಿಗ್ವಿಜಯ್ ಸಿಂಗ್ ಅವರು, ದಲಿತರಿಗೆ ಸಿಎಂ ಸ್ಥಾನ ನೀಡಬೇಕು ಎಂಬ ಬೇಡಿಕೆ ಕುರಿತು ಮಾಧ್ಯಮಗಳ ವರದಿ ನೋಡಿ ನನಗೆ ಆಶ್ಚರ್ಯವಾಯಿತು ಎಂದಿದ್ದಾರೆ.

ಪ್ರತಿ ಸಮುದಾಯಕ್ಕೂ ಅವರ ರಾಜಕೀಯ ಆಕಾಂಕ್ಷೆ ಸಹಜ. ಆದರೆ ಸದ್ಯಕ್ಕೆ ಸಿಎಂ ಬದಲಿಸುವ ಯಾವ ಆಲೋಚನೆಯೂ ನಮ್ಮ ಮುಂದೆ ಇಲ್ಲ. ಸಿದ್ದರಾಮಯ್ಯ ಅವರನ್ನು ಸರ್ವಾನುಮತದಿಂದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಅವರು ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ಅಲ್ಲದೆ ದಲಿತರ ಹಾಗೂ ಹಿಂದುಳಿದವರಿಗಾಗಿ ಸಿದ್ದರಾಮಯ್ಯ ಶ್ರಮಿಸುತ್ತಿದ್ದಾರೆ ಎಂದು ದಿಗ್ವಿಜಯ್ ಹೇಳಿದರು.

ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ಶ್ರಮವನ್ನು ಶ್ಲಾಘಿಸಿದ ದಿಗ್ಗಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಪರಮೇಶ್ವರ ಸಾಕಷ್ಟು ಶ್ರಮಿಸಿದ್ದಾರೆ. ಹಾಗೆಯೇ ಪಕ್ಷಕ್ಕಾಗಿ ದುಡಿದ ಲಕ್ಷಾಂತರ ಕಾರ್ಯಕರ್ತರ ಶ್ರಮವನ್ನು ಮರೆಯಲು ಸಾಧ್ಯವೆ? ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com