

ಬಿಹಾರ: ಕಾರಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿರುವ ಘಟನೆ ಬಿಹಾರದ ನಳಂದ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.
ಪಾಟ್ನದಿಂದ 100 ಕಿ.ಮೀ ದೂರದಲ್ಲಿರುವ ತುಂಗಿ ಹಳ್ಳಿಯಲ್ಲಿ ರೈಲ್ವೆ ಹಳಿ ದಾಟುತ್ತಿರಬೇಕಾದರೆ ಕಾರಿಗೆ ರೈಲು ಡಿಕ್ಕಿ ಹೊಡೆದಿದೆ. ಸಿಬ್ಬಂದಿ ರಹಿತ ರೇಲ್ವೆ ಕ್ರಾಸ್ ಆಗಿರುವುದರಿಂದ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.
ಕಾರಿನಲ್ಲಿ 20 ಪ್ರಯಾಣಿಕರಿದ್ದು, ಅವರಲ್ಲಿ 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಮದುವೆ ಮುಗಿಸಿಕೊಂಡ ಹಳ್ಳಿಗೆ ವಾಪಾಸ್ಸಾಗುತ್ತಿದ್ದ ವೇಳೆ ಈ ಅವಘಡ ಸಂಭವಸಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಸುಮಾರು 1,127 ಸಿಬ್ಬಂದಿ ರಹಿತ ರೈಲ್ವೆ ಕ್ರಾಸಿಂಗ್‌ಗಳಿವೆ. ಪ್ರತಿದಿನ ಸಿಬ್ಬಂದಿ ರಹಿತ ರೈಲ್ವೆ ಕ್ರಾಸಿಂಗ್‌ನಲ್ಲಿ ಸಾವಿರಾರು ಜನರು ತಮ್ಮ ಜೀವ ಕೈಯಲ್ಲಿಟ್ಟುಕೊಂಡು ರೈಲ್ವೆ ಹಳಿ ದಾಟುತ್ತಾರೆ ಎಂದು ರೇಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.