ಭೂ ಸ್ವಾಧೀನ ಸುಗ್ರೀವಾಜ್ಞೆ: ಕೇಂದ್ರ ಸರ್ಕಾರ ಕಾರ್ಪೋರೆಟ್ ವಲಯವನ್ನು ಓಲೈಸುತ್ತಿದೆ ಎಂದ ಕಾಂಗ್ರೆಸ್

ಬೇರೆ ಯಾವುದೇ ಪಕ್ಷಗಳನ್ನು ಗಣನೆಗೆ ತೆಗೆದುಕೊಳ್ಳಲೇ ಭೂ ಸ್ವಾಧೀನ ಸುಗ್ರೀವಾಜ್ಞೆ ಜಾರಿಗೆ ತರಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿರುವುದು ದುರದೃಷ್ಟಕರ.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Updated on

ನವದೆಹಲಿ: ಬೇರೆ ಯಾವುದೇ ಪಕ್ಷಗಳನ್ನು ಗಣನೆಗೆ ತೆಗೆದುಕೊಳ್ಳಲೇ ಭೂ ಸ್ವಾಧೀನ ಸುಗ್ರೀವಾಜ್ಞೆ ಜಾರಿಗೆ ತರಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿರುವುದು ದುರದೃಷ್ಟಕರ. ಕೇಂದ್ರ ಸರ್ಕಾರ ಕಾರ್ಪೋರೆಟ್ ವಲಯವನ್ನು ಓಲೈಸಲು ಈ ನಿರ್ಧಾರ ಕೈಗೊಂಡಿದೆ ಎಂದು ಇದು ತೋರಿಸುತ್ತದೆ ಎಂದಿದ್ದಾರೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ.

ಈ ಭೂ ಸ್ವಾಧೀನ ಸುಗ್ರೀವಾಜ್ಞೆ ರೈತರ ಹಿತಾಸಕ್ತಿಗಳನ್ನು ಕಡೆಗಣಿಸಿದೆ ಎಂದಿರುವ ಖರ್ಗೆ "ಅವರು ಹೊರಡಿಸಿರುವ ಸುಗ್ರೀವಾಜ್ಞೆ ಸರಿಯಲ್ಲ. ಆದುದರಿಂದ ನಾವು ಒಮ್ಮತವಾಗಿ ಇದರ ವಿರುದ್ಧ ಹೊರಾಡುತ್ತಿದ್ದೇವೆ. ಆದುದರಿಂದ ಲೋಕಸಭೆಯಲ್ಲಿ ಈ ವಿಷಯವನ್ನು ಚರ್ಚೆಗೆ ಎತ್ತಿಕೊಳ್ಳುತ್ತೇವೆ" ಎಂದಿದ್ದಾರೆ. ಈ ಸುಗ್ರೀವಾಜ್ಞೆ ವಿರುದ್ಧ ಜಂತರ್ ಮಂತರ್ ನಲ್ಲಿ ಧರಣಿ ಕೂರಲಿರುವ ಅಣ್ಣಾ ಹಜಾರೆ ಅವರಿಗೆ ಕಾಂಗ್ರೆಸ್ ತನ್ನ ಬೆಂಬಲವನ್ನು ವಿಸ್ತರಿಸುವ ಬಗ್ಗೆ ಶೀಘ್ರದಲ್ಲೆ ನಿರ್ಧರಿಸಲಿದ್ದೇವೆ ಎಂದಿದ್ದಾರೆ ಖರ್ಗೆ.

ಇಂದು ಬಜೆಟ್ ಅಧಿವೇಶನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಭಾಷಣದೊಂದಿಗೆ ಪ್ರಾರಂಭವಾಗಿದ್ದು, ಈ ಅಧಿವೇಶನದಲ್ಲಿ ಭೂ ಸ್ವಾಧೀನ ಸುಗ್ರೀವಾಜ್ಞೆಯೂ ಸೇರಿದಂತೆ ಹಲವಾರು ಕಾಯ್ದೆಗಳನ್ನು ಮಂಡಿಸುವ ಇರಾದೆ ಹೊಂದಿದೆ ಕೇಂದ್ರ ಸರ್ಕಾರ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com