
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಅಭ್ಯರ್ಥಿ ಪಟ್ಟಿಯಲ್ಲಿ ದೆಹಲಿ ಬಿಜೆಪಿ ಅಧ್ಯಕ್ಷ ಸತೀಶ್ ಉಪಾಧ್ಯಾಯ ಅವರ ಹೆಸರು ಇಲ್ಲದಿರುವುದು ಅವರ ಬೆಂಬಲಿಗರಿಗೆ ಬೇಸರ ತರಿಸಿದೆ. ಇದರಿಂದ ಕುಪಿತಗೊಂಡಿರುವ ಬೆಂಬಲಿಗರು ಮಂಗಳವಾರ ಸಂಜೆ ಪಕ್ಷದ ಪಂತ್ ಮಾರ್ಗ್ ಕಚೇರಿಯ ಎದುರು ಪ್ರತಿಭಟನೆ ನಡೆಸಿದ್ದಾರೆ.
ಕಿರಣ್ ಬೇಡಿ ಅವರನ್ನು ದೆಹಲಿಯ ಬಿಜೆಪಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಸೋಮವಾರ ತಡ ರಾತ್ರಿ ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಘೋಷಿಸಿದ್ದರು.
ಸತೀಶ್ ಉಪಾಧ್ಯಾಯ ಅವರ ಹೆಸರು ಪಕ್ಷದ ಅಭ್ಯರ್ಥಿಗಳ ಪಟ್ಟಿಯಲ್ಲಿ ಇಲ್ಲ ಎಂಬುದನ್ನ ತಿಳಿದು ಅವರ ಬೆಂಬಲಿಗರು ಪಕ್ಷದ ಕಚೇರಿ ಎದುರು ಸೇರಿ ಪ್ರತಿಭಟನೆ ನಡೆಸಿದ್ದಾರೆ. ಆದರೆ ಅಲ್ಲಿ ಪೋಲಿಸ್ ಪಡೆ ಸನ್ನದ್ಧವಾಗಿದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ.
Advertisement