ಬೆಂಗಳೂರಿನಲ್ಲಿ ಶಂಕಿತ ಬೋಡೋ ಉಗ್ರನ ಬಂಧನ

ಬೆಂಗಳೂರಿನಲ್ಲಿ ಶಂಕಿತ ಬೋಡೋ ಉಗ್ರನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಕೇಂದ್ರ ಗುಪ್ತಚರ ಇಲಾಖೆ ಮತ್ತು ಅಸ್ಸಾಂ ಪೊಲೀಸರು ನೀಡಿದ ಮಾಹಿತಿಯ ಮೇರೆಗೆ ವಿಶೇಷ ಕಾರ್ಯಾಚರಣೆ ನಡೆಸಿದ...
ಶಂಕಿತ ಉಗ್ರನ ಬಂಧನ (ಸಾಂದರ್ಭಿಕ ಚಿತ್ರ)
ಶಂಕಿತ ಉಗ್ರನ ಬಂಧನ (ಸಾಂದರ್ಭಿಕ ಚಿತ್ರ)

ಬೆಂಗಳೂರು: ಬೆಂಗಳೂರಿನಲ್ಲಿ ಶಂಕಿತ ಬೋಡೋ ಉಗ್ರನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಕೇಂದ್ರ ಗುಪ್ತಚರ ಇಲಾಖೆ ಮತ್ತು ಅಸ್ಸಾಂ ಪೊಲೀಸರು ನೀಡಿದ ಮಾಹಿತಿಯ ಮೇರೆಗೆ ವಿಶೇಷ ಕಾರ್ಯಾಚರಣೆ ನಡೆಸಿದ ಬೆಂಗಳೂರು ಪೊಲೀಸರು ಕಾಟನ್‌ಪೇಟೆಯಲ್ಲಿ ಅಡಗಿದ್ದ ಶಂಕಿತ ಬೋಡೋ ಉಗ್ರನನ್ನು ಬಂಧಿಸಿದ್ದಾರೆ. ಬಂಧಿತನು ನಾಗಾಲ್ಯಾಂಡ್ ಮೂಲದ 24 ವರ್ಷದ ಬೀರ್‌ಖಾನ್ ನರ್ಜರಿ ಅಲಿಯಾಸ್ ಬುರ್ಲುಂ ಬುತ್ತೂರ್ ಎಂದು ತಿಳಿದುಬಂದಿದೆ.

ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಲಾಬುರಾಮ್ ಅವರ ನೇತೃತ್ವದಲ್ಲಿ ದಾಳಿ ನಡೆಸಿದ ವಿಶೇಷ ಪೊಲೀಸರ ತಂಡ ಶಂಕಿತ ಬೊಡೋ ಉಗ್ರನನ್ನು ಬಂಧಿಸಿದ್ದಾರೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಎಂಎನ್ ರೆಡ್ಡಿ ಹೇಳಿದರು.


ಗಣರಾಜ್ಯೋತ್ಸವ ಹಿನ್ನಲೆಯಲ್ಲಿ ಉಗ್ರರು ವಿವಿಧ ನಗರಗಳಲ್ಲಿ ದಾಳಿ ನಡೆಸುವ ಕುರಿತು ನಿನ್ನೆಯಷ್ಟೇ ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿತ್ತು. ಇದರ ಬೆನ್ನಲ್ಲೇ ಬೆಂಗಳೂರು ಪೊಲೀಸರು ಶಂಕಿತ ಬೋಡೋ ಉಗ್ರನನ್ನು ಬಂಧಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ದೆಹಲಿಯಲ್ಲಿ ಕಟ್ಟೆಚ್ಚರ ವಹಿಸಿರುವುದರಿಂದ ಉಗ್ರರು ಬೇರೆ ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶ, ಬಿಹಾರ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಉಗ್ರರು ದಾಳಿ ನಡೆಸಬಹುದು ಎಂದು ಎಚ್ಚರಿಕೆ ನೀಡಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com