91 ಶಾಸಕರಿಗೆ ಲೋಕಾ ಶಾಕ್!

ಲೋಕಾಯುಕ್ತ ಸಂಸ್ಥೆಯಲ್ಲಿ ಹೈ ಡ್ರಾಮಾ ನಡೆಯುತ್ತಿರುವ ಬೆನ್ನಲ್ಲೇ, ಶಾಸಕರಿಗೆ ಲೋಕಾಯುಕ್ತ ಸಂಸ್ಥೆ ಶಾಕ್ ನೀಡಿದೆ.
ಲೋಕಾಯುಕ್ತ ಸಂಸ್ಥೆ
ಲೋಕಾಯುಕ್ತ ಸಂಸ್ಥೆ
Updated on: 

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿ ಹೈ ಡ್ರಾಮಾ ನಡೆಯುತ್ತಿರುವ ಬೆನ್ನಲ್ಲೇ, ಶಾಸಕರಿಗೆ ಲೋಕಾಯುಕ್ತ ಸಂಸ್ಥೆ ಶಾಕ್ ನೀಡಿದೆ.

ಪ್ರಸಕ್ತ ಸಾಲಿನಲ್ಲಿ ಅಂದರೆ 2015-16ನಾ ಸಾಲಿನಲ್ಲಿ ನಿಗದಿತ ಅವಧಿಯೊಳಗೆ ಆಸ್ತಿ ವಿವರ ಸಲ್ಲಿಸದ ನಾಲ್ವರು ಸಚಿವರು ಸೇರಿ 91 ಶಾಸಕರಿಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಆಸ್ತಿ ವಿವರ ಸಲ್ಲಿಸಿದ, ಸಲ್ಲಿಸದಿರುವ ಶಾಸಕರ ಯಾದಿಯನ್ನು ಲೋಕಾಯುಕ್ತ ಸಂಸ್ಥೆ ರಾಜ್ಯಪಾಲರಿಗೆ ಸಲ್ಲಿಸಿದೆ.

ಆದರೆ, ಆಸ್ತಿ ವಿವರ ಸಲ್ಲಿಸದ ಶಾಸಕರ ಪಟ್ಟಿಯನ್ನು ಲೋಕಾಯುಕ್ತ ಸಂಸ್ಥೆ ಇನ್ನೂ ಬಹಿರಂಗಗೊಳಿಸಿಲ್ಲ. ಸದ್ಯ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಲೋಕಾಯುಕ್ತ ಎಸ್ಪಿ ನೋಟಿಸ್ ಜಾರಿಗೊಳಿಸಲಿದ್ದಾರೆ. ಆಸ್ತಿ ವಿವರ ಸಲ್ಲಿಸದ 91 ಸದಸ್ಯರಲ್ಲಿ 73 ಮಂದಿ ವಿಧಾನಸಭೆ ಸದಸ್ಯರು, ವಿಧಾನ ಪರಿಷತ್‍ನ 14 ಸದಸ್ಯರಿದ್ದಾರೆ ಎಂದು ಲೋಕಾಯುಕ್ತ ಸಂಸ್ಥೆಯ ಉನ್ನತ ಮೂಲಗಳು ಖಚಿಪಡಿಸಿದೆ.

ವಿಧಾನಸಭೆಯ 225 ಶಾಸಕರಲ್ಲಿ 107 ಶಾಸಕರು ಆಸ್ತಿ ವಿವರ ಸಲ್ಲಿಸಿದ್ದಾರೆ. ಇವರಲ್ಲಿ 89 ಮಂದಿ ಶಾಸಕರಿಗೆ ನೋಟಿಸ್ ಜಾರಿಯಾಗಿತ್ತು. ವಿಧಾನ ಪರಿಷತ್‍ನ 75 ಸದಸ್ಯರ ಪೈಕಿ 57 ಮಂದಿ ನಿಗದಿತ ಅವಧಿಯೊಳಗೆ ಸಲ್ಲಿಸಿದ್ದಾರೆ. ಇನ್ನುಳಿದವರಿಗೆ ನೋಟಿಸ್ ನೀಡಲಾಗಿತ್ತು. ನೋಟಿಸ್ ಪಡೆದಿದ್ದ 30 ಸಚಿವರ ಪೈಕಿ 22 ಸಚಿವರು ಆಸ್ತಿ ವಿವರ ಸಲ್ಲಿಸಿದ್ದಾರೆ. ನೋಟಿಸ್ ಪಡೆದಿದ್ದ 8 ಸಚಿವರ ಪೈಕಿ, ನಾಲ್ವರು ಮಾತ್ರ ಆಸ್ತಿ ವಿವರ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com