ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ಬಿಬಿಎಂಪಿ ಚುನಾವಣೆ: ಸುಪ್ರೀಂ ಡೆಡ್‌ಲೈನ್ ಅಕ್ಟೋಬರ್ ಅಲ್ಲ, ಸೆಪ್ಟೆಂಬರ್ 3

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಗೆ ಸುಪ್ರೀಂ ಕೋರ್ಟ್ ನಿನ್ನೆ 8 ವಾರಗಳ ಕಾಲಾವಕಾಶ ನೀಡಿತ್ತು. ಆದರೆ ನಿನ್ನೆಯಿಂದ 8 ವಾರನೋ ಅಥವಾ...

ನವದೆಹಲಿ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಗೆ ಸುಪ್ರೀಂ ಕೋರ್ಟ್ ನಿನ್ನೆ 8 ವಾರಗಳ ಕಾಲಾವಕಾಶ ನೀಡಿತ್ತು. ಆದರೆ ನಿನ್ನೆಯಿಂದ 8 ವಾರನ ಅಥವಾ ಚುನಾವಣೆ ಘೋಷಣೆಯಾಗಿರುವ ಜುಲೈ 28ರಿಂದ 8 ವಾರನೋ ಎಂಬುದರ ಬಗ್ಗೆ ಗೊಂದಲ ಇತ್ತು. ಇಂದು ಆ ಗೊಂದಲಕ್ಕೆ ತೆರೆ ಬಿದ್ದಿದ್ದು, ಸೆಪ್ಟೆಂಬರ್ 3ರೊಳಗೆ ಬಿಬಿಎಂಪಿ ಚುನಾವಣೆಯನ್ನು ನಡೆಸಬೇಕಾಗಿದೆ.

ಈ ಗೊಂದಲದ ನಡುವೆಯೇ ನಿನ್ನೆ ಮಾಧ್ಯಮಗಳು ಜುಲೈ 28ರಿಂದ 8 ವಾರ ಎಂದು ಪರಿಗಣಿಸಿ ಅಕ್ಟೋಬರ್ 5ರೊಳೆಗೆ ಬಿಬಿಎಂಪಿ ಚುನಾವಣೆ ನಡೆಸಬೇಕು ಎಂದು ಸುಪ್ರೀ ಕೋರ್ಟ್ ಸೂಚಿಸಿರುವುದಾಗಿ ವರದಿ ಮಾಡಿದ್ದವು.

ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ನಿನ್ನೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು ಅವರು ನೀಡಿದ್ದ ಆದೇಶದ ಪ್ರತಿಯನ್ನು ಇಂದು ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, ತೀರ್ಪಿನ ಪ್ರತಿಯ ಪ್ರಕಾರ ನಿನ್ನೆಯಿಂದ 8 ವಾರಗಳ ಕಾಲಾವಕಾಶ ನೀಡಿರುವುದು ಸ್ಪಷ್ಟವಾಗಿದೆ.

ಪ್ರಸ್ತುತ 2001ರ ಜನಗಣತಿ ಪ್ರಕಾರ ಮೀಸಲು ನಿಗದಿ ಮಾಡಲಾಗಿದೆ. ಆದರೆ 2011ರ ಜನಗಣತಿಯಂತೆ ಮೀಸಲು ನಿಗದಿ ಮಾಡಿ ಚುನಾವಣೆ ನಡೆಸಲು ಕಾಲಾವಕಾಶ ನೀಡಬೇಕು ಎಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ 8 ವಾರಗಳ ಕಾಲಾವಕಾಶ ನೀಡಿತ್ತು.

Related Stories

No stories found.

Advertisement

X
Kannada Prabha
www.kannadaprabha.com