ವ್ಯಾಪಂ ಹಗರಣದ ಸಿಬಿಐ ತನಿಖೆ ಕೋರಿಕೆಯ ಎಲ್ಲಾ ಅರ್ಜಿಗಳ ವಿಚಾರಣೆ ಜುಲೈ 9ಕ್ಕೆ: ಸುಪ್ರೀಂ ಕೋರ್ಟ್

ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ 2 ವರ್ಷದಲ್ಲಿ 48 ಸಾಕ್ಷಿಗಳು ನಿಗೂಢವಾಗಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ...
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on: 

ನವದೆಹಲಿ: ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ 2 ವರ್ಷದಲ್ಲಿ ಇದುವರಗೆ 48 ಸಾಕ್ಷಿಗಳು ನಿಗೂಢವಾಗಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಸುಪ್ರಿಂ ಕೋರ್ಟ್ ನಿರ್ದೇಶನ ನೀಡಬೇಕೆಂದು ಕೋರಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿದೆ.

ವ್ಯಾಪಂ ಹಗರಣಕ್ಕೆ ಸಂಬಂಧಪಟ್ಟ ಎಲ್ಲಾ ಅರ್ಜಿಗಳನ್ನು ಜುಲೈ 9 ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ವ್ಯಾಪಂ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕಾಂಗ್ರೆಸ್ ಪಕ್ಷ ಸೇರಿದಂತೆ ಇತರೆ ಪಕ್ಷಗಳು ಒತ್ತಡ ಹೇರಿದ್ದವು.

ಇನ್ನೂ ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಬೆಂಬಲಕ್ಕೆ ನಿಂತಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ಮಧ್ಯಪ್ರದೇಶ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಮಾತ್ರ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಬಹುದು ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com