ಅಶ್ವಿನ್ ರಾವ್ ವಿರುದ್ಧ ಎಫ್‌ಐಆರ್: ಲೋಕಾಯುಕ್ತ ಪೊಲೀಸರಿಗೆ 'ಹೈ' ನೋಟಿಸ್

ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರು...
ಹೈಕೋರ್ಟ್
ಹೈಕೋರ್ಟ್
Updated on: 

ಬೆಂಗಳೂರು: ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಲೋಕಾಯುಕ್ತ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.

ಅಶ್ವಿನ್ ರಾವ್ ವಿರುದ್ಧದ ಎಫ್‌ಐಆರ್ ಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಆದರೆ ಪ್ರತಿವಾದಿಗಳಾದ ಉಪ ಲೋಕಾಯುಕ್ತ, ಲೋಕಾಯುಕ್ತ ರಿಜಿಸ್ಟ್ರಾರ್ ಮತ್ತು ಲೋಕಾಯುಕ್ತ ಪೊಲೀಸರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ಈಗಾಗಲೇ ವಿಶೇಷ ತನಿಖಾ ತಂಡ ಪ್ರಕರಣದ ತನಿಖೆ ನಡೆಸುತ್ತಿದ್ದು, ಈ ಮಧ್ಯೆ ಲೋಕಾಯುಕ್ತ ಪೊಲೀಸರು ಸಹ ಎಫ್‌ಐಆರ್ ದಾಖಲಿಸಿದ್ದಾರೆ. ಒಂದೇ ಪ್ರಕರಣದಲ್ಲಿ ಇಬ್ಬರು ತನಿಖೆ ನಡೆಸುವುದು ಸೂಕ್ತವಲ್ಲ. ಆದ್ದರಿಂದ ಎಫ್‌ಐಆರ್ ರದ್ದುಗೊಳಿಸಬೇಕು ಎಂದು ಕೋರಿ ಅಶ್ವಿನ್ ರಾವ್ ಮಧ್ಯಂತರ ಅರ್ಜಿ ದಾಖಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾ.ಎನ್.ಕುಮಾರ್ ಮತ್ತು ನ್ಯಾ.ಶ್ರೀನಿವಾಸಗೌಡ ಅವರಿದ್ದ ವಿಭಾಗೀಯ ಪೀಠ ಪ್ರತಿವಾದಿಗಳ ವಾದವನ್ನೂ ಸಹ ಆಲಿಸಬೇಕಿದೆ. ಆ ಬಳಿಕ ವಿಚಾರಣೆ ನಡೆಸುವುದಾಗಿ ಪೀಠ ಹೇಳಿದೆ.

ತಡೆಯಾಜ್ಞೆ ನೀಡಿದ್ದ ಹೈಕೋರ್ಟ್: ಉಪ ಲೋಕಾಯುಕ್ತ ನ್ಯಾ.ಸುಭಾಷ್ ಬಿ.ಅಡಿ ಅವರು ಎಸ್‌ಪಿ ಸೋನಿಯಾ ನಾರಂಗ್ ಅವರಿಗೆ ತನಿಖೆ ನಡೆಸುವಂತೆ ಆದೇಶಿಸಿದ್ದರು. ಆದರೆ ಉಪ ಲೋಕಾಯುಕ್ತರ ಆದೇಶ ಪ್ರಶ್ನಿಸಿ ಅಶ್ವಿನ್ ರಾವ್ ಅವರು ರಿಟ್ ಅರ್ಜಿ ಸಲ್ಲಿಸಿದ್ದರು.

ಜು.1ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಭಾಗೀಯ ಪೀಠ, ಒಂದೇ ಪ್ರಕರಣ ಸಂಬಂಧ ಎರಡು ತನಿಖೆ ಏಕೆ ಎಂದು ಅಭಿಪ್ರಾಯಪಟ್ಟು, ಉಪ ಲೋಕಾಯುಕ್ತರ ಆದೇಶಕ್ಕೆ ತಡೆ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com