

ಹೈದರಾಬಾದ್: ಆಂಧ್ರಪ್ರದೇಶದ ರಾಜಮಂಡ್ರಿಯ ಗೋದಾವರಿ ಪುಷ್ಕರ ಸ್ನಾನದ ವೇಳೆ ಕಾಲ್ತುಳಿತಕ್ಕೆ ಸಿಕ್ಕಿ ಮೃತಗೊಂಡವರ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಸಾವುಗಳಿಂದ ಅಪಾರ ನೋವಾಗಿದೆ ಎಂದು ತಿಳಿಸಿದ್ದಾರೆ.
"ರಾಜಮಂಡ್ರಿಯಲ್ಲಾದ ಕಾಲ್ತುಳಿತಕೆ ಸಿಕ್ಕಿ ಜೀವ ಕಳೆದುಕೊಂಡವರ ಬಗ್ಗೆ ಅತೀವ ನೋವಾಗುತ್ತಿದೆ. ಮೃತಪಟ್ಟ ಜನರ ಕುಟುಂಬಗಳಿಗೆ ನನ್ನ ಸಂತಾಪ ಮತ್ತು ಗಾಯಗೊಂಡವರಿಗಾಗಿ ಪ್ರಾರ್ಥಿಸುತ್ತೇನೆ" ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.