ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ಮುಂದುವರೆಸಲು ಸುಪ್ರೀಂ ಆದೇಶ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆ ಪ್ರಕ್ರಿಯೆ ಮುಂದುವರೆಸುವಂತೆ ಸೋಮವಾರ ಸುಪ್ರೀಂ ಕೋರ್ಟ್ ಆದೇಶಿಸಿದ್ದು, ಇದರಿಂದ...
ಬಿಬಿಎಂಪಿ
ಬಿಬಿಎಂಪಿ

ನವದೆಹಲಿ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆ ಪ್ರಕ್ರಿಯೆ ಮುಂದುವರೆಸುವಂತೆ ಸೋಮವಾರ ಸುಪ್ರೀಂ ಕೋರ್ಟ್ ಆದೇಶಿಸಿದ್ದು, ಇದರಿಂದ ಶತಾಯಗತಾಯ ಬಿಬಿಎಂಪಿ ಚುನಾವಣೆಯನ್ನು ಮುಂದೂಡಬೇಕು ಎಂಬ ರಾಜ್ಯ ಸರ್ಕಾರದ ಯತ್ನಕ್ಕೆ ಭಾರಿ ಹಿನ್ನಡೆಯಾಗಿದೆ.

ಚುನಾವಣೆಗೆ 8 ವಾರ ಕಾಲಾವಕಾಶ ನೀಡಿದ್ದ ಬಗ್ಗೆ ಸ್ಪಷ್ಟೀಕರಣ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು ನೇತೃತ್ವದ ಪೀಠ, ಬಿಬಿಎಂಪಿ ಚುನಾವಣೆ ಪ್ರಕ್ರಿಯೆಯಲ್ಲಿ ಮಧ್ಯಪ್ರೇವಶಿಸಲು ನಿರಾಕರಿಸಿದೆ. ಅಲ್ಲದೆ ಕಾಲಮಿತಿಯೊಳಗೆ ಚುನಾವಣೆ ನಡೆಸುವಂತೆ ಸೂಚಿಸಿದೆ.

ಬಿಬಿಎಂಪಿ ಈಗ ಆಡಳಿತಾಧಿಕಾರಿಯ ಕೈಯಲ್ಲಿ ಇದೆ. ಜನಪ್ರತಿನಿಧಿಗಳು ಏಕೆ ಬಿಬಿಎಂಪಿಯನ್ನು ವಹಿಸಿಕೊಳ್ಳಬಾರದು? ಇಂದಲ್ಲ ನಾಳೆ ಚುನಾವಣೆಯನ್ನು ಎದುರಿಸಲೇಬೇಕು. ಚುನಾವಣೆ ಎದುರಿಸಲು ನಿಮಗೆ ಏನು ತೊಂದರೆ? ಎಂದು ಕೋರ್ಟ್ ಪ್ರಶ್ನಿಸಿದೆ.

ನಾಲ್ಕು ದಿನಗಳ ಹಿಂದೆಯೇ ರಾಜ್ಯ ಚುನಾವಣಾ ಆಯೋಗ ಬಿಬಿಎಂಪಿ ಚುನಾವಣಾ ವೇಳಾ ಪಟ್ಟಿ ಪ್ರಕಟಿಸಿದೆ. ಆದರೂ ಚುನಾವಣೆ ನಡೆಯುವ ಬಗ್ಗೆ ಹಲವು ಗೊಂದಲಗಳು ಮೂಡಿದ್ದವು. ಇದೀಗ ಸುಪ್ರೀಂ ಕೋರ್ಟ್ ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿದ್ದು, ಸಿದ್ದು ಸರ್ಕಾರ ಚುನಾವಣೆ ಎದುರಿಸಲು ಸಿದ್ಧವಾಗಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com