ಬಿಬಿಎಂಪಿ
ಬಿಬಿಎಂಪಿ

ಬಿಬಿಎಂಪಿ ತ್ರಿವಿಭಜನೆ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು, ಕಾಂಗ್ರೆಸ್‌ಗೆ ಮುಖಭಂಗ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯನ್ನು ಮೂರು ಭಾಗ ಮಾಡುವ ಕರ್ನಾಟಕ ನಗರ ಪಾಲಿಕೆಗಳ(ತಿದ್ದುಪಡಿ) ವಿಧೇಯಕ-2015ಕ್ಕೆ...

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯನ್ನು ಮೂರು ಭಾಗ ಮಾಡುವ ಕರ್ನಾಟಕ ನಗರ ಪಾಲಿಕೆಗಳ(ತಿದ್ದುಪಡಿ) ವಿಧೇಯಕ-2015ಕ್ಕೆ ಮೇಲ್ಮನೆಯಲ್ಲಿ ಸೋಲಾಗಿದೆ. ಇದರಿಂದ ಆಡಳಿತ ಪಕ್ಷಕ್ಕೆ ಭಾರಿ ಮುಖಭಂಗವಾಗಿದೆ.

ಬಿಬಿಎಂಪಿ ವಿಭಜನೆ ವಿಚಾರ ಸಂಬಂಧ ರಚಿಸಲಾಗಿದ್ದ ಎಸ್.ಆರ್.ಪಾಟೀಲ್ ನೇತೃತ್ವದ ಸೆಲೆಕ್ಟ್ ಕಮಿಟಿಯ ವರದಿಯನ್ನು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ಇಂದು ವಿಧಾನ ಪರಿಷತ್‌ನಲ್ಲಿ ಮಂಡಿಸಿದರು.

ಚರ್ಚೆಯ ಬಳಿಕ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರು ವಿಧೇಯಕವನ್ನು ಮತಕ್ಕೆ ಹಾಕಿದರು. ವಿಧೇಯಕದ ಪರವಾಗಿ ಆಡಳಿತ ಪಕ್ಷದ 28 ಮತಗಳು ಹಾಗೂ ವಿರುದ್ಧವಾಗಿ 30 ಮತಗಳು ಚಲಾವಣೆಯಾದವು.

ಸದ್ಯ ವಿಧಾನ ಪರಿಷತ್‌ನಲ್ಲಿ ಸೋತಿರುವ ಇದೇ ಬಿಬಿಎಂಪಿ ವಿಭಜನೆ ವಿಧೇಯಕವನ್ನು ಸರ್ಕಾರ ಮತ್ತೊಮ್ಮೆ ವಿಧಾನಸಭೆಯಲ್ಲಿ ಮಂಡಿಸಿ, ಅಂಗೀಕರಿಸುವ ಮೂಲಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಮೂರು ಭಾಗವಾಗಿ ಮಾಡಲು ಮುಂದಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com