ಲೋಕಾ ಲಂಚಕ್ಕೆ ಮೊದಲ ಸೆರೆ

ಲೋಕಾಯುಕ್ತ ಕಚೇರಿ ಲಂಚ ಹಗರಣದಲ್ಲಿ ಪ್ರಮುಖ ಪಾತ್ರ ವಹಿಸಿದ ಆರೋಪಿ ಅಶೋಕ್ ಕುಮಾರ್ ಅಲಿಯಾಸ್ ಅಶೋಕ್(30 ) ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಲೋಕಾಯುಕ್ತ(ಸಂಗ್ರಹ ಚಿತ್ರ)
ಲೋಕಾಯುಕ್ತ(ಸಂಗ್ರಹ ಚಿತ್ರ)

ಬೆಂಗಳೂರು: ಲೋಕಾಯುಕ್ತ ಕಚೇರಿ ಲಂಚ ಹಗರಣದಲ್ಲಿ ಪ್ರಮುಖ ಪಾತ್ರ ವಹಿಸಿದ ಆರೋಪಿ ಅಶೋಕ್ ಕುಮಾರ್ ಅಲಿಯಾಸ್ ಅಶೋಕ್(30 ) ಎಂಬಾತನನ್ನು ವಿಶೇಷ ತನಿಖಾ ತಂಡದ(ಎಸ್.ಐ.ಟಿ) ಅಧಿಕಾರಿಗಳು ಬಂಧಿಸಿದ್ದಾರೆ.

ಇದರ ಜತೆಯಲ್ಲೇ ಎಸ್.ಐ.ಟಿ ಮುಂದೆ ಹಾಜರಾಗುವಂತೆ ನ್ಯಾ.ಭಾಸ್ಕರ್ ರಾವ್ ಪುತ್ರ ಅಶ್ವಿನ್ ರಾವ್ ವಿರುದ್ಧ ನೊಟೀಸ್ ಜಾರಿಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಬಂಧಿತ ಆರೋಪಿ ಅಶೋಕ್ ನನ್ನು ಮಂಗಳವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು 10 ದಿನಗಳ ಕಾಲ ನ್ಯಾಯಾಂಗ   ವಶಕ್ಕೆ ಪಡೆದುಕೊಂಡಿದ್ದಾರೆ. ಆಂಧ್ರ ಮೂಲದ ಈತನನ್ನು ಪ್ರಕರಣದ ಎರಡನೇ ಆರೋಪಿಯಾಗಿ ಗುರುತಿಸಲಾಗಿದೆ. ರಾಜಾಜಿನಗರ ನಿವಾಸಿಯಾಗಿರುವ ಅಶೋಕ್ ಸೆಕ್ಯುರಿಟಿ ಏಜೆನ್ಸಿ ರಿಯಲ್ ಎಸ್ಟೇಟ್ ಹಾಗೂ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಕೃಷ್ಣಮೂರ್ತಿ ಅವರು ನೀಡಿದ ದೂರು ಆಧರಿಸಿ ತನಿಖೆ ನಡೆಸುತ್ತಿರುವ ಎಸ್.ಐಟಿ ಅಧಿಕಾರಿಗಳು ಕೃಉಷ್ಣಮೂರ್ತಿಯವರನ್ನು ಲೋಕಾಯುಕ್ತ ಕಚೇರಿಗೆ ಕರೆಸಿಕೊಂಡ ವ್ಯಕ್ತಿ ಯಾರು ಎನ್ನುವ ಬಗ್ಗೆ ತೀವ್ರ ವಿಚಾರಣೆ ನಡೆಸುತ್ತಿದ್ದರು. ಈ ವೇಳೆ ಅಶೋಕ್ ಕುಮಾರ್ ಎಂಬಾತನೇ ಕೃಷ್ಣಾ ಮೂರ್ತಿಯವರನ್ನು ಲೋಕಾಯುಕ್ತ ಕಚೇರಿಗೆ ಫೋನ್ ಕರೆ ಮಾಡಿ ಬರಲು ಹೇಳಿದ್ದ ಎಂದು ತಿಳಿದುಬಂದಿದೆ. ಹೀಗಾಗಿ ಕೂಡಲೇ ಕಾರ್ಯಪ್ರವೃತ್ತರಾದ  ಅಧಿಕಾರಿಗಳು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಈತನೊಂದಿಗೆ ಲಂಚಕ್ಕೆ ಬೇಡಿಕೆ ಇಡುವ ಹಗರಣದಲ್ಲಿ ಶಾಮೀಲಾಗಿರುವ ಇತರ ಆರೋಪಿಗಳಿಗಾಗಿ ಶೋಧಕಾರ್ಯ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪಿಗಳ ಪೈಕಿ ಅಶೋಕ್ ಕುಮಾರ್ ಎಂಬಾತನೇ ಪ್ರಮುಖ ಆರೋಪಿಯಾಗಿದ್ದು ಇತರ ಆರೋಪಿಗಳೊಂದಿಗೆ ಸೇರಿ ಒಳಸಂಚು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಲೋಕಾಯುಕ್ತ ಸಂಸ್ಥೆಯ ಹೆಸರಿನಲ್ಲಿ ಹಲವು ಅಧಿಕಾರಿಗಳಿಗೆ ಬೇಡಿಕೆ ಹಾಕಲಾಗುತ್ತಿದೆ ಎನ್ನುವ ಆರೋಪಗಳು ಕೇಳಿಬರುತ್ತಿದೆ. ಆದರೆ ಎಸ್.ಐ.ಟಿ ಅಧಿಕಾರಿಗಳು ಮೊದಲು ಅಧಿಕೃತ ಎಫ್.ಐ.ಆರ್ ದಾಖಲಾಗಿರುವ ಪ್ರಕರಣವನ್ನೇ ಕೇಂದ್ರಬಿಂದುವಾಗಿಟ್ಟುಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com