
ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಶೇಷ ತನಿಖಾ ತಂಡ(ಎಸ್ ಐಟಿ) ಗುರುವಾರ ಮತ್ತೊಬ್ಬರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದ ಎಸ್ ಐಟಿ ಇಂದು ಮತ್ತೊಬ್ಬರನ್ನು ವಶಕ್ಕೆ ತೆಗೆದುಕೊಂಡಿದೆ.
ಬೆಂಗಳೂರಿನಲ್ಲಿ ಹೊಟ್ಟೆಕೃಷ್ಣ ಎಂಬುವವರನ್ನು ವಶಕ್ಕೆ ತೆಗೆದುಕೊಂಡಿರುವ ಎಸ್ ಐಟಿ ಯಾವ ರೀತಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ವಿಚಾರಣೆ ನಡಸಲಾಗುತ್ತಿದ್ದು, ಇಂದು ಸಂಜೆಯೊಳಗೆ ಬಂಧಿಸುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ.
ನಿನ್ನೆಯಷ್ಟೇ ಶಂಕರೇಗೌಡ ಮತ್ತು ಶ್ರೀನಿವಾಸ ಗೌಡ ಎಂಬ ಆರೋಪಿಗಳನ್ನ ಬಂಧಿಸಲಾಗಿತ್ತು.
Advertisement