

ಬೆಂಗಳೂರು: ಸಾಲಬಾಧೆಯಿಂದಾಗಿ ರಾಜ್ಯದಲ್ಲಿ ರೈತರ ಆತ್ಮಹತ್ಯೆ ನಿರಂತರವಾಗಿ ನಡೆಯುತ್ತಿರುವ ಹಿನ್ನಲೆಯಲ್ಲಿ ಜುಲೈ 27ರಂದು ದೆಹಲಿಯ ಜಂತರ್ ಮಂತರ್ ನಲ್ಲಿ ಉಪವಾಸ ಸತ್ಯಾಗ್ರಹ ಮಾಡಲು ಮಾಜಿ ಪ್ರಧಾನಿ ಜೆಡಿಎಸ್ ಮುಖ್ಯಸ್ಥ ಎಚ್.ಡಿ ದೇವೇಗೌಡ ಅವರು ನಿರ್ಧರಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡರು, ಸಾಲಬಾಧೆಯಿಂದಾಗಿ ರಾಜ್ಯದಲ್ಲಿನ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ರೈತರ ಸಮಸ್ಯೆ ಬಗ್ಗೆ ರಾಷ್ಟ್ರದ ಗಮನ ಸೆಳೆಯುವ ಸಲುವಾಗಿ ಉಪವಾಸವನ್ನು ಮಾಡುವುದಾಗಿ ಹೇಳಿದ್ದಾರೆ.
ದಿನ ಬೆಳಗಾದರೆ ಕನಿಷ್ಠ ಎಳುರಿಂದ ಎಂಟು ಮಂದಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ರೈತರ ಸಾವನ್ನು ನೋಡಿಕೊಂಡು ಕಣ್ಣಿದ್ದು ಕುರುಡನಂತೆ ಕೂರಲು ಸಾಧ್ಯವಿಲ್ಲ. ಹೀಗಾಗಿ ಈ ನಿರ್ಧಾರಕ್ಕೆ ಬಂದಿರುವುದಾಗಿ ದೇವೇಗೌಡರು ಹೇಳಿದ್ದಾರೆ.