
ಉಡುಪಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ವಸಂತ್ ಸಾಲಿಯಾನ ಅವರು ಶನಿವಾರ ನಿಧನರಾಗಿದ್ದಾರೆ.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸಾಲಿಯಾನ ಅವರು ಇಂದು ಮಧ್ಯಾಹ್ನ ಉಡುಪಿ ಹೈಟೆಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
72 ವರ್ಷದ ವಸಂತ್ ಸಾಲಿಯಾನ ಅವರು ಇಬ್ಬರು ಪುತ್ರಿಯರು ಹಾಗೂ ಪತ್ನಿಯನ್ನು ಅಗಲಿದ್ದಾರೆ.
ಕಾಪು ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಾಲಿಯಾನ ಅವರು, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಹಾಗೂ ವೀರಪ್ಪ ಮೊಯಿಲಿ ಅವರ ಸರ್ಕಾರದಲ್ಲಿ ಸಚಿವರಾಗಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಬಳಿಕ ಒಂದು ವರ್ಷದ ಹಿಂದೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು.
Advertisement