
ಬೆಂಗಳೂರು: ಯಾವುದೇ ಒತ್ತಡ ಹಾಗೂ ಪ್ರತಿಭಟನೆಗೆ ಬಗ್ಗದೇ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರು ಇದೀಗ ಪುತ್ರ ಅಶ್ವಿನ್ ರಾವ್ ಅವರ ಬಂಧನದ ಹಿನ್ನೆಲೆಯಲ್ಲಿ ತೀವ್ರ ಮುಜುಗರಕ್ಕೆ ಒಳಗಾದಿದ್ದು, ಇಂದು ಸಂಜೆಯೊಳಗೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ.
ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಅಶ್ವಿನ್ ರಾವ್ ಅವರು ಇಂದು ಬೆಳಗ್ಗೆ ಮಹಾರಾಷ್ಟ್ರದ ಔರಂಗಬಾದ್‌ನಲ್ಲಿ ಎಸ್‌ಐಟಿ ಬಂಧಿಸಿದ್ದು, ಇದರ ಬೆನ್ನಲ್ಲೇ ಸ್ವತಃ ನ್ಯಾ.ಭಾಸ್ಕರ್ ರಾವ್ ಅವರು ಸಹ ಬಂಧನ ಭೀತಿ ಎದುರಿಸುತ್ತಿದ್ದು, ನಿರೀಕ್ಷಣಾ ಜಾಮೀನು ಪಡೆಯಲು ಖ್ಯಾತ ವಕೀಲ ಅಶೋಕ್ ಹಾರ್ನಳ್ಳಿ ಅವರ ಜೊತೆ ಚರ್ಚಿಸುತ್ತಿದ್ದಾರೆ ಎನ್ನಲಾಗಿದೆ.
Advertisement