ಈ ಉದ್ದೇಶಕ್ಕಾಗಿ ದೇಶದಲ್ಲಿರುವ ಎಲ್ಲಾ ಎಸ್ಪಿ ದರ್ಜೆಯ ಅಧಿಕಾರಿಗಳಿಗೆ ಅರ್ಜಿದಾರರ ರಾಷ್ಟ್ರೀಯ ಜನಸಂಖ್ಯೆ ದಾಖಲಾತಿ (ಎನ್‍ಪಿಆರ್), ಆಧಾರ್ ಕಾರ್ಡ್ ಮತ್ತು ಚುನಾವಣಾ ಗುರುತಿನ ಚೀಟಿ ಮಾಹಿತಿ ಪಡೆದುಕೊಳ್ಳಲು ಗೃಹ ಇಲಾಖೆ ಅವಕಾಶ ಕಲ್ಪಿಸಲಿದೆ. ಇದೇ ವೇಳೆ `ಅಪರಾಧ ಮತ್ತು ಅಪರಾಧಿಗಳ ಮೇಲೆ ನಿಗಾ ಇರಿಸುವ ವ್ಯವಸ್ಥೆ' (ಸಿಸಿಟಿಎನ್‍ಎಸ್) ಸಹಾಯದಿಂದ ಅರ್ಜಿದಾರನ ಗುರುತು, ವಿಳಾಸ, ಅಪರಾಧ ಹಿನ್ನೆಲೆ ಹಾಗೂ ಇತರ ಮಾಹಿತಿಯನ್ನು ಆನ್‍ಲೈನ್ ಮೂಲಕ ಪರಿಶೀಲನೆ ನಡೆಸಲಾಗುತ್ತದೆ.