ಅಕ್ರಮ ಆಸ್ತಿ ಗಳಿಕೆ ಪ್ರಕರಣ: ತಮಿಳುನಾಡು ಸಿಎಂ ಜಯಾಗೆ ಸುಪ್ರೀಂ ನೋಟಿಸ್

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರಿಗೆ ಸೋಮವಾರ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಜಯಲಲಿತಾ
ಜಯಲಲಿತಾ
Updated on: 

ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರಿಗೆ ಸೋಮವಾರ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಜಯಾಗೆ ಕ್ಲೀನ್‌ಚಿಟ್ ನೀಡಿದ್ದ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಸಿ.ಘೋಸ್, ಈ ಸಂಬಂಧ ಜಯಲಲಿತಾ ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಿದೆ.

ಮೇ 13ರಂದು ಜಯಲಲಿತಾ ನಿರ್ದೋಷಿ ಎಂದು ಹೈಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ.

ಅಕ್ರಮ ಆಸ್ತಿ ಗಳಿಕೆ ಲೆಕ್ಕಾಚಾರದಲ್ಲಿ ತಪ್ಪಾಗಿದ್ದು, ಲೆಕ್ಕಾಚಾರ ಸರಿಪಡಿಸಿದರೆ ಜಯಲಲಿತಾ ಅವರ ಅಕ್ರಮ ಆಸ್ತಿ ಪ್ರಮಾಣ ಶೇ.76ರಷ್ಟು ಹೆಚ್ಚಾಗುತ್ತದೆ. ಸ್ವತಃ ಆರೋಪಿಗಳೇ ಕೆಲ ಅಂಕಿ ಅಂಶಗಳನ್ನು ಒಪ್ಪಿಕೊಂಡಿದ್ದಾರೆ. ಆದರೆ ಹೈಕೋರ್ಟ್ ಕಡಿಮೆ ಅಂಕಿ ಅಂಶವನ್ನು ಪರಿಗಣಿಸಿದೆ. ಹೀಗಾಗಿ ಹೈಕೋರ್ಟ್ ತೀರ್ಪು ದೋಷಪೂರಿತವಾಗಿದ್ದು, ತೀರ್ಪು ರದ್ದುಪಡಿಸಬೇಕು ಎಂದು ಕರ್ನಾಟಕ ಮೇಲ್ಮನವಿ ಸಲ್ಲಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com