

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ(ಎಸ್ ಐಟಿ) ರಹಸ್ಯ ಸ್ಥಳದಲ್ಲಿ ಆರೋಪಿಯ ವಿಚಾರಣೆ ನಡೆಸುತ್ತಿದೆ.
ಇಂದು ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಎಸ್ ಐಟಿ ಕಚೇರಿಯಿಂದ ಪ್ರಕರಣದ ಎರಡನೇ ಆರೋಪಿ ಅಶೋಕ್ ಕುಮಾರ್ ನನ್ನು ಎಸ್ ಐಟಿ ಅಧಿಕಾರಿಗಳು ರಹಸ್ಯ ಸ್ಥಳಕ್ಕೆ ಕರೆದೊಯ್ದಿದ್ದು, ತೀರ್ವ ವಿಚಾರಣೆಗೆ ಒಳಪಡಿಸಿದ್ದಾರೆ.
ಪ್ರಕರಣದ ಮೊದಲನೇ ಆರೋಪಿ ಅಶ್ವಿನ್ ರಾವ್ ಅವರನ್ನು ವಶಕ್ಕೆ ತೆಗೆದುಕೊಂಡಿರುವ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದು, ನಾಪತ್ತೆಯಾಗಿರುವ ಮತ್ತೊಬ್ಬ ಆರೋಪಿ ಭಾಸ್ಕರ್ ಬಂಧನಕ್ಕೂ ಕೂಡ ಬಲೆ ಬೀಸಿದ್ದಾರೆ.