ಯಾಕೂಬ್ ಮೆಮನ್ ಗಲ್ಲು ಶಿಕ್ಷೆಗೆ ತಡೆ ನೀಡಲು ಸುಪ್ರೀಂ ನಕಾರ: ನಾಳೆ ನೇಣು ಸಾಧ್ಯತೆ

1993 ಮುಂಬೈ ಬಾಂಬ್ ಸ್ಪೋಟದ ಅಪರಾಧಿ ಯಾಕುಬ್ ಮೆಮನ್ ಗಲ್ಲು ಶಿಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು...
ಯಾಕೂಬ್ ಮೆಮನ್
ಯಾಕೂಬ್ ಮೆಮನ್

ನವದೆಹಲಿ: 1993 ಮುಂಬೈ ಬಾಂಬ್ ಸ್ಪೋಟದ ಅಪರಾಧಿ ಯಾಕುಬ್ ಮೆಮನ್ ಗಲ್ಲು ಶಿಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ನಿಗದಿಯಂತೆ ನಾಳೆ ಗಲ್ಲು ಶಿಕ್ಷೆ ವಿಧಿಸುವ ಸಾಧ್ಯತೆ ಇದೆ.

ಗಲ್ಲು ಶಿಕ್ಷೆ ಪ್ರಶ್ನಿಸಿ ಯಾಕೂಬ್ ಮೆಮನ್ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದನು. ವಿಚಾರಣೆ ನಡೆಸಿದ ನ್ಯಾಯಾಮೂರ್ತಿಗಳಾದ ಡಿ.ಮಿಶ್ರಾ, ನ್ಯಾ.ಪಿ.ಸಿ ಪಂತ್ ನೇತೃತ್ವದ ವಿಸ್ತೃತ ಪೀಠ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಯಾಕೂಬ್ ಮೆಮನ್ ಕಾನೂನು ಹೋರಾಟದ ಕೊನೇ ಅವಕಾಶದಲ್ಲೂ ಸೋಲು ಕಂಡಂತಾಗಿದೆ.

ನಿನ್ನೆ ಯಾಕೂಬ್ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ದ್ವಿಸದಸ್ಯ ಪೀಠದ ನ್ಯಾಯಾಧೀಶರ ನಡುವೆ ಭಿನ್ನಾಭಿಪ್ರಾಯ ಉಂಟಾದ ಹಿನ್ನಲೆಯಲ್ಲಿ ಅರ್ಜಿ ವಿಚಾರಣೆಯನ್ನು  ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಾಪೀಠಕ್ಕೆ ವರ್ಗಾವಣೆ ಮಾಡಿ, ಗಲ್ಲು ಶಿಕ್ಷೆಗೆ ತಡೆ ನೀಡಿತ್ತು.

ಅಲ್ಲದೇ, ಕ್ಷಮಾದಾನ ಕೋರಿ ಸಲ್ಲಿಸಲಾಗಿದ್ದ ಯಾಕೂಬ್ ಮೆಮನ್ ಮನವಿಯನ್ನು ಮಹಾರಾಷ್ಟ್ರದ ರಾಜ್ಯಪಾಲ ವಿದ್ಯಾಸಾಗರ್ ರಾವ್ ತಿರಸ್ಕರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com