ಕೊನೆಗೂ ಯಾಕೂಬ್ ಮೆಮನ್ ಗೆ ಗಲ್ಲು

1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ, ಉಗ್ರ ಯಾಕುಬ್ ಮೆಮನ್​ಗೆ ಗುರುವಾರ ಬೆಳಗ್ಗೆ 6.30 ವೇಳೆಯಲ್ಲಿ ನಾಗ್ಪುರದ ಕೇಂದ್ರ ಕಾರಾಗೃಹದಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿದೆ...
ಯಾಕೂಬ್ ಮೆಮನ್ ಗೆ ಗಲ್ಲು
ಯಾಕೂಬ್ ಮೆಮನ್ ಗೆ ಗಲ್ಲು

ಕಾನ್ಪುರ: 1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ, ಉಗ್ರ ಯಾಕುಬ್ ಮೆಮನ್​ಗೆ ಗುರುವಾರ ಬೆಳಗ್ಗೆ 6.30 ವೇಳೆಯಲ್ಲಿ ನಾಗ್ಪುರದ ಕೇಂದ್ರ ಕಾರಾಗೃಹದಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿದೆ.

1993ರಲ್ಲಿ ನಡೆದ ಮುಂಬೈ ಸರಣಿ ಸ್ಫೋಟದಲ್ಲಿ ಸುಮಾರು 273 ಮಂದಿಯ ಧಾರುಣ ಸಾವಿಗೆ ಕಾರಣವಾಗಿದ್ದ ಭೂಗತ ಪಾತಕಿಗೆ ಇಂದು ಮಹಾರಾಷ್ಟ್ರದ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿ ಗಲ್ಲು ಶಿಕ್ಷೆ ಜಾರಿ ಮಾಡಲಾಗಿದೆ. ಗಲ್ಲು ಶಿಕ್ಷೆ ಜಾರಿ ವೇಳೆ ನ್ಯಾಯಾಧೀಶರು, ಜೈಲು ವೈದ್ಯರು, ಡಿಐಜಿ ಮತ್ತು ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕರು ಉಪಸ್ಥಿತರಿದ್ದರು.

ರಾಷ್ಟ್ರಪತಿಗಳಿಗೆ ಸಲ್ಲಿಕೆ ಮಾಡಲಾಗಿದ್ದ ಕ್ಷಮಾದಾನ ಅರ್ಜಿ ತಿರಸ್ಕೃತಗೊಂಡ ಹಿನ್ನಲೆಯಲ್ಲಿ ನಿನ್ನೆ ಮತ್ತೆ ಯಾಕೂಬ್ ಮೆಮನ್ ಪರ ವಕೀಲರು ನಿನ್ನೆ ಮತ್ತೆ ಕ್ಷಮಾದಾನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ಅರ್ಜಿಯ ಕುರಿತು ಕೇಂದ್ರ ಗೃಹ ಇಲಾಖೆ ಮತ್ತು ರಾಷ್ಟ್ರಪತಿ ಕಚೇರಿ ಮತ್ತೆ ವಿಚಾರಣೆ ನಡೆಸುವ ಯಾವುದೇ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿತು. ಹೀಗಾಗಿ ಎರಡನೇ ಬಾರಿಯೂ ಯಾಕೂಬ್ ಕ್ಷಮಾದಾನ ಅರ್ಜಿಯನ್ನು ತಿರಸ್ಕೃತಗೊಳಿಸಲಾಗಿತ್ತು.

ಇನ್ನು ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ನಿನ್ನೆ ತಡರಾತ್ರಿ ಸುಮಾರು 3ಗಂಟೆಯಲ್ಲಿ ವಿಚಾರಣೆ ನಡೆಸಲಾಯಿತು.  ಗಲ್ಲು ಶಿಕ್ಷೆಗೆ ತಡೆ ನೀಡುವಂತೆ ಯಾಕುಬ್ ಸುಪ್ರೀಂ ಕೋರ್ಟಿಗೆ ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು ಅವರ ನಿವಾಸದಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ನಂತರ ಸುಪ್ರೀಂ ಕೋರ್ಟ್​ನ ತ್ರಿಸದಸ್ಯ ಪೀಠ ಕೊಠಡಿ ಸಂಖ್ಯೆ 4 ರಲ್ಲಿ ಸುಮಾರು 90 ನಿಮಿಷ ವಿಚಾರಣೆ ನಡೆಸಲಾಯಿತು. 3.20 ಕ್ಕೆ ವಿಚಾರಣೆ ಪೂರ್ಣಗೊಳಿಸಿದ ಪೀಠ ಗಲ್ಲು ಶಿಕ್ಷೆಯನ್ನು ಕಾಯಂಗೊಳಿಸಿತು. ಬುಧವಾರ ಸುಪ್ರೀಂ ಕೋರ್ಟ್​ನ ತ್ರಿಸದಸ್ಯ ಪೀಠ ಯಾಕುಬ್​ನ ಕ್ಯುರೇಟಿವ್ ಅರ್ಜಿಯನ್ನು ತಿರಸ್ಕರಿಸಿತ್ತು ಮತ್ತು ಗಲ್ಲು ಶಿಕ್ಷೆಯನ್ನು ವಿಧಿಸುವಂತೆ ಆದೇಶಿತ್ತು. ಯಾಕುಬ್ ಮೇನನ್ ಮೃತ ದೇಹ ಮಧ್ಯಾಹ್ನದ ವೇಳೆಗೆ ಮುಂಬೈಗೆ ರವಾನಿಸುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com