
ಜಾರ್ಖಂಡದ ಪಲಮು ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ನಡೆದ ಪೊಲೀಸ್ ಎನ್ ಕೌಂಟರ್ ನಲ್ಲಿ ೧೨ ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸತ್ಬಾರ್ವಾ ಪೊಲೀಸ್ ಠಾಣೆಯ ಹತ್ತಿರದ ರಸ್ತೆಯೊಂದರಲ್ಲಿ ಮಾವೋವಾದಿಗಳು ಚಲಿಸುತ್ತಿದ್ದಾರೆ ಎಂಬ ಸುಳಿವು ಸಿಕ್ಕ ನಂತರ ಪೊಲೀಸರು ವಾಹನಗಳನ್ನು ವಶಪಡಿಸಿಕೊಳ್ಳಲು ಅಡ್ಡಗಟ್ಟಿದ್ದಾಗಿ ತಿಳಿದುಬಂದಿದೆ. ಆದರೆ ನಂತರ ನಡೆದ ಗುಂಡಿನ ಕಾಳಗದಲ್ಲಿ ೧೨ ಜನ ನಕ್ಸಲರನ್ನು ಪೊಲೀಸರು ಹತ್ಯೆಗೈದಿದ್ದಾರೆ.
ವಾಹನಗಳಲ್ಲಿ ಭಾರಿ ಸಂಖ್ಯೆಯ ಉನ್ನತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement